Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಬಾಂಗ್ಲಾದೇಶದಲ್ಲಿ ಭೂಕುಸಿತದಿಂದ ಆದ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು, ಬಾಂಗ್ಲಾದೇಶದಲ್ಲಿ ಭೂಕುಸಿತದಿಂದ ಉಂಟಾಗಿರುವ ಜೀವಹಾನಿಗೆ ದುಃಖ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶಕ್ಕೆ ಭಾರತದ ಸಹಾನುಭೂತಿ ವ್ಯಕ್ತಪಡಿಸಿರುವ ಪ್ರಧಾನಿ, ಸ್ಥಳೀಯ ಶೋಧ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯಬಿದ್ದರೆ ಭಾರತ ಸನ್ನದ್ಧವಾಗಿದೆ ಎಂದು ತಿಳಿಸಿದ್ದಾರೆ.

“ಭೂಕುಸಿತದಿಂದ ಬಾಂಗ್ಲಾದೇಶದಲ್ಲಿ ಆಗಿರುವ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ ಮತ್ತು ಗಾಯಾಳುಗಳೊಂದಿಗೆ ನನ್ನ ಪ್ರಾರ್ಥನೆ ಇದೆ.

ಭಾರತ ಬಾಂಗ್ಲಾದೇಶದೊಂದಿಗೆ ಹೆಗಲಿಗೆ ಹೆಗಲುಕೊಟ್ಟು ನಿಲ್ಲಲಿದೆ. ಸ್ಥಳೀಯ ಶೋಧ ಮತ್ತು ಪರಿಹಾರ ಪ್ರಯತ್ನಗಳಿಗೆ ನೆರವಿನ ಅಗತ್ಯವಿದ್ದರೆ ಭಾರತ ನೀಡಲು ಸಿದ್ಧವಿದೆ.” ಎಂದು ಪ್ರಧಾನಿ ತಿಳಿಸಿದ್ದಾರೆ..

****

AKT/NT