Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ಕಲ್ ಎಕ್ಸ್ ಪ್ರೆಸ್ ಹಳಿತಪ್ಪಿದ ಬಗ್ಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ
ಉತ್ಕಲ್ ಎಕ್ಸ್ ಪ್ರೆಸ್ ಹಳಿ ತಪ್ಪಿರುವ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಈ
ಪರಿಸ್ಥಿತಿಯ ಬಗ್ಗೆ ಸೂಕ್ಷ್ಮ ಗಮನ ಹರಿಸಲಾಗಿದೆ ಎಂದು ತಿಳಿಸಿರುವ ಪ್ರಧಾನಮಂತ್ರಿ,
ರೈಲ್ವೆ ಸಚಿವಾಲಯ ಹಾಗೂ ಉತ್ತರ ಪ್ರದೇಶ ಸರ್ಕಾರ ಎಲ್ಲ ಅಗತ್ಯ ಹಾಗೂ ಸಾಧ್ಯ ನೆರವು
ಒದಗಿಸುತ್ತಿವೆ ಎಂದು ತಿಳಿಸಿದ್ದಾರೆ.

“ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಹಳಿ ತಪ್ಪಿರುವುದು
ತೀವ್ರ ನೋವು ತಂದಿದೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬದೊಂದಿಗೆ ನನ್ನ ಸಂವೇದನೆ ಇದೆ.
ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರೈಲ್ವೆ
ಸಚಿವಾಲಯವು ಪರಿಸ್ಥಿತಿ ಬಗ್ಗೆ ಸೂಕ್ಷ್ಮವಾಗಿ ನಿಗಾ ವಹಿಸಿದೆ.

ರೈಲು ಹಳಿತಪ್ಪಿರುವ ಹಿನ್ನೆಲೆಯಲ್ಲಿ ರೈಲ್ವೆ ಸಚಿವಾಲಯ ಮತ್ತು ಉತ್ತರ ಪ್ರದೇಶ
ಸರ್ಕಾರ ಎಲ್ಲ ಅಗತ್ಯ ಹಾಗೂ ಸಾಧ್ಯ ನೆರವು ಒದಗಿಸುತ್ತಿವೆ”, ಎಂದು ಪ್ರಧಾನಿ
ತಿಳಿಸಿದ್ದಾರೆ.

******