Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಈಜಿಪ್ಟ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈಜಿಪ್ಟ್ ನ ಪ್ರಾರ್ಥನಾ ಸ್ಥಳದ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ. ಈ ದಾಳಿ ಅನಾಗರಿಕವಾದದ್ದು ಎಂದಿರುವ ಪ್ರಧಾನಿ, ಮುಗ್ಧ ಜೀವಗಳ ಹಾನಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ ಮತ್ತು ಭಯೋತ್ಪಾದನೆಯ ಎಲ್ಲ ಸ್ವರೂಪದ ವಿರುದ್ಧ ಹೋರಾಟ ನಡೆಸಲು ಈಜಿಪ್ಟ್ ಗೆ ಭಾರತದ ಅಚಲ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.

“ಈಜಿಪ್ಟ್ ನ ಪ್ರಾರ್ಥನಾ ಸ್ಥಳದ ಮೇಲೆ ನಡೆದ ಅನಾಗರಿಕ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಮುಗ್ಧ ಜೀವಗಳ ಹಾನಿಗೆ ನಮ್ಮ ಆಳವಾದ ಸಂತಾಪಗಳು. ಭಾರತವು ಎಲ್ಲಾ ಸ್ವರೂಪದ ಭಯೋತ್ಪಾದನೆ ವಿರುದ್ಧದ ಹೋರಾಟವನ್ನು ದೃಢವಾಗಿ ಬೆಂಬಲಿಸುತ್ತದೆ ಮತ್ತು ಈಜಿಪ್ಟಿನ ಸರ್ಕಾರ ಹಾಗೂ ಜನರೊಂದಿಗೆ ನಿಲ್ಲುತ್ತದೆ” ಎಂದು ಪ್ರಧಾನಿ ಹೇಳಿದ್ದಾರೆ.

****