Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಸುನಾಮಿಯಿಂದಾಗಿ ಇಂಡೋನೇಷ್ಯಾದಲ್ಲಿ ಆಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಸುನಾಮಿಯಿಂದಾಗಿ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

“ ಜ್ವಾಲಾಮುಖಿಯಿಂದ ಉಂಟಾಗಿರುವ ಸುನಾಮಿಯಿಂದ ಇಂಡೋನೇಷ್ಯಾದಲ್ಲಿ ಸಂಭವಿಸಿದ ಜೀವಹಾನಿ ಮತ್ತು ವಿನಾಶಗಳಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ ಸೂಚಿಸುತ್ತಿದ್ದೇನೆ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಹಾರೈಸುತ್ತೇನೆ. ನಮ್ಮ ಸಮುದ್ರ ಕಿನಾರೆಯ ನೆರೆಯ ಹಾಗೂ ಮಿತ್ರ ರಾಷ್ಟ್ರ ಗಳಿಗೆ ಅಗತ್ಯ ಸಹಾಯ ಮಾಡಲು ಭಾರತ ಸಿದ್ಧವಿದೆ” ಎಂದು ಪ್ರಧಾನಮಂತ್ರಿ ಹೇಳಿದ್ದಾರೆ.

***