Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಭಾರತ ಮತ್ತು ಅರ್ಜೆಂಟಿನಾ ನಡುವೆ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟದ ಅನುಮೋದನೆ


ಭಾರತ ಮತ್ತು ಅರ್ಜೆಂಟಿನಾ ನಡುವಿನ ಪ್ರವಾಸೋದ್ಯಮ ಕ್ಷೇತ್ರದ ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಲು, ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.

ಭಾರತ ಮತ್ತು ಅರ್ಜೆಂಟಿನಾ ಈ ಒಪ್ಪಂದಕ್ಕೆ ಸಹಿ ಹಾಕುವುದರಿಂದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉಭಯ ದೇಶಗಳ ಮಧ್ಯೆ ಸಹಕಾರ ವೃದ್ಧಿಗೆ ಸಾಂಸ್ಥಿಕ ವ್ಯವಸ್ಥೆಯನ್ನು ಸೃಷ್ಟಿಸಲು ಅನುಕೂಲವಾಗಲಿದೆ.