
ಭಾರತ-ಜಪಾನ್ ವಿದೇಶಾಂಗ ಮತ್ತು ರಕ್ಷಣಾ ಮಂತ್ರಿ ಸಂವಾದದ (2 + 2) ಉದ್ಘಾಟನಾ ಸಭೆ ಜರುಗಿತು. ಅಕ್ಟೋಬರ್ 2018 ರಲ್ಲಿ ಜಪಾನಿನಲ್ಲಿ ನಡೆದ 13ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ದ್ವಿಪಕ್ಷೀಯ ಭದ್ರತೆ ಮತ್ತು ರಕ್ಷಣಾ ಸಹಕಾರವನ್ನು ಇನ್ನಷ್ಟು ಗಟ್ಟಿಗೊಳಿಸುವುದಕ್ಕಾಗಿ ವಿದೇಶಾಂಗ ಮತ್ತು ರಕ್ಷಣಾ ಮಂತ್ರಿಗಳ ಸಂವಾದವನ್ನು ಏರ್ಪಡಿಸಲು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಜಪಾನಿನ ಪ್ರಧಾನ ಮಂತ್ರಿ ಶ್ರೀ ಶಿಂಜೊ ಅಬೆ ತೆಗೆದುಕೊಂಡ ನಿರ್ಧಾರದ ಪ್ರಕಾರ ಈ ಸಭೆ ನಡೆಯಿತು.
ರಕ್ಷಾ ಮಂತ್ರಿ ಶ್ರೀ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು 2 + 2 ಭಾರತೀಯ ನಿಯೋಗದ ನೇತೃತ್ವ ವಹಿಸಿದ್ದರೆ, ಜಪಾನಿನ ನಿಯೋಗದ ನೇತೃತ್ವವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಶ್ರೀ ತೋಷಿಮಿಟ್ಸು ಮೊಟೆಗಿ ಮತ್ತು ರಕ್ಷಣಾ ಸಚಿವ ತಾರೊ ಕೊನೊ ವಹಿಸಿದ್ದರು.
2 + 2 ಸಭೆಯು ಭಾರತ ಮತ್ತು ಜಪಾನ್ ನಡುವಿನ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಬಲಪಡಿಸುವ ಕುರಿತ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಹೆಚ್ಚಿನ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ‘ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಸಹಭಾಗಿತ್ವ’ಕ್ಕೆ ಹೆಚ್ಚು ವಿವರಗಳನ್ನು ಒದಗಿಸುತ್ತದೆ.
ಉಭಯ ದೇಶಗಳ ಜನರಿಗೆ ಮತ್ತು ಪ್ರದೇಶದ ಉತ್ತಮ ಭವಿಷ್ಯಕ್ಕಾಗಿ, ಇಂಡೋ-ಪೆಸಿಫಿಕ್ ಪ್ರದೇಶದ ಪರಿಸ್ಥಿತಿ ಮತ್ತು ಭಾರತದ ‘ಆಕ್ಟ್ ಈಸ್ಟ್ ಪಾಲಿಸಿ’ ಮತ್ತು ಜಪಾನ್ನ ‘ಮುಕ್ತ ಮತ್ತು ತೆರೆದ ಇಂಡೋ-ಪೆಸಿಫಿಕ್ ನೋಟ’ (ಪ್ರೀ ಅಂಡ್ ಓಪೆನ ಇಂಡೋ ಪೆಸಿಫಿಕ್ ವಿಷನ್) ಅಡಿಯಲ್ಲಿ ತಮ್ಮ ಶಾಂತಿ, ಸಮೃದ್ಧಿ ಮತ್ತು ಪ್ರಗತಿಯ ಹಂಚಿಕೆಯ ಉದ್ದೇಶವನ್ನು ಸಾಧಿಸಲು ತಮ್ಮ ಪ್ರಯತ್ನಗಳ ಬಗ್ಗೆ ಎರಡೂ ಕಡೆಯವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು.
Had a wonderful interaction with Mr. Toshimitsu Motegi, Minister for Foreign Affairs and Mr. Taro Kono, Minister of Defence of Japan.
— Narendra Modi (@narendramodi) November 30, 2019
We had extensive discussions on ways to boost India-Japan cooperation. https://t.co/nUTZqtVkY8