Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಚುನಾವಣಾ ನಿರ್ವಹಣೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ ಚುನಾವಣಾ ಆಯೋಗ ಮತ್ತು ಮಾಲ್ಡೀವ್ಸ್ ಚುನಾವಣಾ ಆಯೋಗದ ನಡುವಿನ ಒಪ್ಪಂದಕ್ಕೆ ಸಂಪುಟದ ಅನುಮೋದನೆ


 

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಚುನಾವಣಾ ನಿರ್ವಹಣೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಹಕಾರ ಕುರಿತು ಮಾಲ್ಡೀವ್ಸ್ ಚುನಾವಣಾ ಆಯೋಗದೊಂದಿಗೆ ತಿಳುವಳಿಕೆ ಒಪ್ಪಂದ (ಎಂಒಯುಮಾಡಿಕೊಳ್ಳುವ ಚುನಾವಣಾ ಆಯೋಗದ ಪ್ರಸ್ತಾವನೆಗೆ ಅನುಮೋದನೆ ನೀಡಿದೆಚುನಾವಣಾ ಪ್ರಕ್ರಿಯೆಯ ಸಾಂಸ್ಥಿಕ ಮತ್ತು ತಾಂತ್ರಿಕ ಅಭಿವೃದ್ಧಿಯ ಕ್ಷೇತ್ರದಲ್ಲಿ ಜ್ಞಾನ ಮತ್ತು ಅನುಭವದ ವಿನಿಮಯ, ಮಾಹಿತಿ ವಿನಿಮಯಸಾಂಸ್ಥಿಕ ಬಲಪಡಿಸುವಿಕೆ ಮತ್ತು ಸಾಮರ್ಥ್ಯ ವೃದ್ಧಿಸಿಬ್ಬಂದಿಗಳ ತರಬೇತಿನಿಯಮಿತ ಸಮಾಲೋಚನೆಗಳನ್ನು ನಡೆಸುವಲ್ಲಿ ಬೆಂಬಲವನ್ನು ಈ ಒಪ್ಪಂದ ಒಳಗೊಂಡಿದೆ.

ಉದ್ದೇಶಿತ ಒಪ್ಪಂದವು ದ್ವಿಪಕ್ಷೀಯ ಸಹಕಾರವನ್ನು ಉತ್ತೇಜಿಸುತ್ತದೆ, ಮಾಲ್ಡೀವ್ಸ್ ಚುನಾವಣಾ ಆಯೋಗಕ್ಕೆ ತಾಂತ್ರಿಕ ನೆರವು, ಸಾಮರ್ಥ್ಯ ವೃದ್ಧಿಗೆ ಬೆಂಬಲವನ್ನು ನೀಡುವ, ಚುನಾವಣಾ ನಿರ್ವಹಣೆ ಮತ್ತು ಆಡಳಿತ ಕ್ಷೇತ್ರದಲ್ಲಿ ಸಹಕಾರವನ್ನು ರೂಪಿಸುವ ಗುರಿಯನ್ನು ಹೊಂದಿದೆ.