Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಕೊರೊನಾ ವೈರಸ್ ವಿರುದ್ಧ ಹೋರಾಡಲು ಕಾರ್ಯತಂತ್ರ ರೂಪಿಸುವಂತೆ ಸಾರ್ಕ್ ರಾಷ್ಟ್ರಗಳಿಗೆ ಪ್ರಧಾನಿ ಕರೆ


ಕೊರೊನಾ ವೈರಸ್ ವಿರುದ್ಧ ಹೋರಾಡಲು ಬಲವಾದ ಕಾರ್ಯತಂತ್ರವನ್ನು ರೂಪಿಸುವಂತೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸಾರ್ಕ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ. ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ತಂತ್ರಗಳನ್ನು ಚರ್ಚಿಸಬಹುದು ಮತ್ತು ಸಾರ್ಕ್ ರಾಷ್ಟ್ರಗಳು ಒಟ್ಟಾಗಿ ಜಗತ್ತಿಗೆ ಒಂದು ಮಾದರಿಯಾಗಬಹುದು ಮತ್ತು ಆರೋಗ್ಯಕರ ಗ್ರಹಕ್ಕೆ ಕೊಡುಗೆ ನೀಡಬಹುದು ಎಂದು ಅವರು ಸಲಹೆ ನೀಡಿದ್ದಾರೆ.

ಗಮನಾರ್ಹ ಪ್ರಮಾಣದ ಜಾಗತಿಕ ಜನಸಂಖ್ಯೆಯನ್ನು ಹೊಂದಿರುವ ದಕ್ಷಿಣ ಏಷ್ಯಾವು ತನ್ನ ಜನರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನಿ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ. COVID-19 ಕೊರೊನಾ ವೈರಸ್ ಎದುರಿಸಲು ಸರ್ಕಾರವು ವಿವಿಧ ಹಂತಗಳಲ್ಲಿ ಉತ್ತಮ ಪ್ರಯತ್ನವನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.