Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ರಾಜಕೋಟ್ ಆಸ್ಪತ್ರೆ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ಪ್ರಧಾನಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅವಗಢದಿಂದ ಸಂಭವಿಸಿದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರು ಟ್ವೀಟ್ ನಲ್ಲಿ “ರಾಜಕೋಟ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತದಿಂದ ಸಂಭವಿಸಿದ ಪ್ರಾಣಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಈ ದುರಂತದಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡವರೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ತ್ವರಿತವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಆಡಳಿತ, ಎಲ್ಲ ಸಾಧ್ಯ ನೆರವಿನ ಖಾತ್ರಿ ಒದಗಿಸಲಿದೆ.”ಎಂದು  ತಿಳಿಸಿದ್ದಾರೆ.

***