ಪಿಎಂಇಂಡಿಯಾ
ಪಶ್ಚಿಮ ಬಂಗಾಳದ ಜಲ್‌ಪೈಗುರಿಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಮೃತರ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿದ್ದಾರೆ.
ಈ ಕುರಿತು ಪ್ರಧಾನ ಮಂತ್ರಿಯವರು ಸರಣಿ ಟ್ವೀಟ್ ಮಾಡಿದ್ದಾರೆ. “ಪಶ್ಚಿಮ ಬಂಗಾಳದ ಜಲ್ಪೈಗುರಿ ಯ ಧುಪ್ಗುರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತವು ಅತ್ಯಂತ ದುಃಖಕರವಾದುದು. ಈ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ.”
“ಪಶ್ಚಿಮ ಬಂಗಾಳದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರ ನೀಡಲಾಗುವುದು” ಎಂದು ಪ್ರಧಾನಿಯವರು ಘೋಷಿಸಿದ್ದಾರೆ.
***
The road accident in Dhupguri in Jalpaiguri (West Bengal) is extremely anguishing. In this time of sadness, prayers with the bereaved families. May the injured recover soon: PM @narendramodi
— PMO India (@PMOIndia) January 20, 2021
From the PMNRF, Ex-gratia of Rs. 2 lakh each would be given to the next of kin of those who have lost their lives due to the accident in West Bengal. Rs. 50,000 each would be given to those injured.
— PMO India (@PMOIndia) January 20, 2021