Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಭಾರತ ಮತ್ತು ಲಾವೋ ನಡುವೆ ವಾಯು ಸೇವೆಗಳ ಒಪ್ಪಂದಕ್ಕೆ ಅಂಕಿತ ಹಾಕಲು ಸಂಪುಟ ಸಮ್ಮತಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಭಾರತ ಮತ್ತು ಲಾವೋ ಪ್ರಜಾಸತ್ತಾತ್ಮಕ ಗಣರಾಜ್ಯ (ಲಾವೋ ಪಿಡಿಆರ್) ನಡುವೆ ಹೊಸ ವಾಯು ಸೇವೆಗಳ ಒಪ್ಪಂದ (ಎ.ಎಸ್.ಎ.)ಗೆ ಅಂಕಿತ ಹಾಕಲು ತನ್ನ ಅನುಮೋದನೆ ನೀಡಿದೆ.

ಈ ಒಪ್ಪಂದವು ನಾಗರಿಕ ವಿಮಾನಯಾನ ವಲಯದಲ್ಲಿನ ಅಭಿವೃದ್ಧಿಯೊಂದಿಗೆ ಎರಡೂ ದೇಶಗಳ ನಡುವೆ ಹೆಚ್ಚಿನ ವಾಣಿಜ್ಯ, ಹೂಡಿಕೆ, ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಪ್ರೇರಣೆ ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.

ಇದು ಎರಡೂ ಕಡೆಯ ವಿಮಾನಯಾನ ಸಂಸ್ಥೆಗಳಿಗೆ ಹೆಚ್ಚಿನ ಸುರಕ್ಷತೆ ಮತ್ತು ಭದ್ರತೆಯ ಖಾತ್ರಿಯೊಂದಿಗೆ ವಾಣಿಜ್ಯ ಅವಕಾಶಗಳನ್ನು ಒದಗಿಸುವುದರ ಜೊತೆಗೆ ಹೆಚ್ಚಿನ ಮತ್ತು ತಡೆರಹಿತ ಸಂಪರ್ಕದ ಪರಿಸರ ದೊರಕಲು ಅನುವು ಮಾಡಿಕೊಡುತ್ತದೆ.
ಈ ಒಪ್ಪಂದದ ಅನ್ವಯ ಎರಡೂ ದೇಶಗಳ ನಿಯೋಜಿತ ವಿಮಾನಯಾನ ಸಂಸ್ಥೆಗಳಿಗೆ ನಿರ್ದಿಷ್ಟ ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸಲು ಮುಕ್ತ ಮತ್ತು ಸಮಾನ ಅವಕಾಶಗಳು ಇರುತ್ತವೆ. ನಂತರ ಮಾರ್ಗಗಳು ಮತ್ತು ಆವರ್ತನಗಳ ಬಗ್ಗೆ ನಿರ್ಧರಿಸಲಾಗುತ್ತದೆ. ಎರಡು ರಾಷ್ಟ್ರಗಳ ನಡುವೆ ಯಾವುದೇ ವೈಮಾನಿಕ ಕಾರ್ಯಾಚರಣೆಗೆ ಎ.ಎಸ್.ಎ. ಮೂಲ ಕಾನೂನಾತ್ಮಕ ಚೌಕಟ್ಟಾಗಿದೆ.

***