Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿಯವರು ನಾರಿ ಶಕ್ತಿಗೆ ವಂದಿಸಿದರು


ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ‘ನಾರಿ ಶಕ್ತಿ’ ಯ ಸ್ಫೂರ್ತಿಗೆ ವಂದಿಸಿದರು.

“ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು, ನಾವು ನಮ್ಮ ಅದಮ್ಯವಾದ ಸ್ತ್ರೀ ಶಕ್ತಿಗೆ ನಮಿಸುತ್ತೇವೆ. ನಾವು ಮಹಿಳಾ ಸಬಲೀಕರಣಕ್ಕೆ ಪ್ರೋತ್ಸಾಹ ನೀಡಲು ತೆಗೆದುಕೊಂಡ ಹಲವಾರು ನಿರ್ಧಾರಗಳ ಬಗ್ಗೆ ನಮಗೆ ಹೆಮ್ಮೆ ಇದೆ. ಹಲವಾರು ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆ ಮಾಡಿದ ಮಹಿಳೆಯರ ಬಗ್ಗೆ ಪ್ರತಿ ಭಾರತೀಯನಿಗೂ ಹೆಮ್ಮೆ ಇದೆ” ಎಂದು ಪ್ರಧಾನ ಮಂತ್ರಿಗಳು ತಿಳಿಸಿದರು.