Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಪಘಾನಿಸ್ತಾನ ಭಯೋತ್ಪಾದಕ ದಾಳಿಗೆ ಪ್ರಧಾನ ಮಂತ್ರಿ ಖಂಡನೆ.


ಅಪಘಾನಿಸ್ತಾನದಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಗಳನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಲವಾಗಿ ಖಂಡಿಸಿದ್ದಾರೆ.

“ಅಪಘಾನಿಸ್ತಾನದಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ. ಅವು ಅಪಘಾನಿಸ್ತಾನದ ಬಹುಸಂಸ್ಕೃತಿಯ ಮೇಲೆ ನಡೆದ ದಾಳಿಗಳಾಗಿವೆ. ದುಃಖ ತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಇಂತಹ ದುಃಖದ ಸಂಧರ್ಭದಲ್ಲಿ ಅಪಘಾನಿಸ್ತಾನದ ಸರಕಾರಕ್ಕೆ ನೆರವಾಗಲು ಭಾರತ ಸಿದ್ದವಿದೆ” ಎಂದು ಪ್ರಧಾನ ಮಂತ್ರಿ ಹೇಳಿದ್ದಾರೆ.

*****