ಪಿಎಂಇಂಡಿಯಾ
ಅಮೆರಿಕ ಮತ್ತು ಭಾರತ ನಡುವಿನ ರಕ್ಷಣಾ ಸಹಕಾರವನ್ನು ಬಲಪಡಿಸುವ ನಿಟ್ಟಿನಲ್ಲಿ ಕಾರ್ಟರ್ ಅವರ ಕೊಡುಗೆಯನ್ನು ಪ್ರಧಾನ ಮಂತ್ರಿಯವರು ಪ್ರಶಂಸಿಸಿದರು.
ಈ ವರ್ಷ ಜೂನ್ ತಿಂಗಳಿನಲ್ಲಿ ತಾವು ಕೈಗೊಂಡ ಯಶಸ್ವೀ ಅಮೆರಿಕಾ ಪ್ರವಾಸವನ್ನು ಪ್ರಧಾನಮಂತ್ರಿ ಸ್ಮರಿಸಿದರು. ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯೂಹಾತ್ಮಕ ಪಾಲುದಾರಿಕೆಯನ್ನು ಬಲಪಡಿಸುವ ಮತ್ತು ಸದೃಢಗೊಳಿಸುವ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಈ ವರ್ಷ ಜೂನ್ ನಲ್ಲಿ ಕೈಗೊಂಡ ನಿರ್ಧಾರಗಳು ಮತ್ತು ಒಪ್ಪಂದಗಳನ್ನು ಮುಂದೆ ತೆಗೆದುಕೊಂಡು ಹೋಗುವಲ್ಲಿ ಆಗಿರುವ ಪ್ರಗತಿಯ ಬಗ್ಗೆ ಕಾರ್ಟರ್ ಅವರು ಪ್ರಧಾನಮಂತ್ರಿಯವರಿಗೆ ವಿವರಿಸಿದರು.
ಪ್ರಾದೇಶಿಕ ವಿಚಾರಗಳು ಮತ್ತು ಏಷ್ಯಾ ಪೆಸಿಫಿಕ್ ವಲಯದಲ್ಲಿನ ಬೆಳವಣಿಗೆಗಳ ಬಗ್ಗೆಯೂ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡರು.
Mr. Ashton Carter, US Secretary of Defence met PM @narendramodi in Delhi. @DeptofDefense pic.twitter.com/DU9j9TxjxS
— PMO India (@PMOIndia) December 8, 2016
Had a very good meeting with US Secretary of Defence, Mr. Ashton Carter. pic.twitter.com/VtSmnnhq2z
— Narendra Modi (@narendramodi) December 8, 2016