Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅಮೆರಿಕ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಐತಿಹಾಸಿಕ ಎರಡನೇ ಅವಧಿಗೆ ಪ್ರಧಾನಮಂತ್ರಿ ಅಭಿನಂದನೆ


ಐತಿಹಾಸಿಕ ಎರಡನೇ ಅವಧಿಗೆ ಅಮೆರಿಕದ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಪರಸ್ಪರ ಅನುಕೂಲಕರ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಗೆ ಬದ್ಧರಾಗಿದ್ದು, ನಮ್ಮ ಜನರ ಒಳಿತಿಗಾಗಿ ಹಾಗೂ ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಭದ್ರತೆಗಾಗಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್‌ ಪೋಸ್ಟ್‌ ಹೀಗಿದೆ:

“ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷರಾದ @realDonaldTrump @POTUS ಅವರೊಂದಿಗೆ ಮಾತನಾಡಿದ್ದು ಸಂತಸ ತಂದಿದೆ. ಐತಿಹಾಸಿಕ ಎರಡನೇ ಅವಧಿಯ ಅಧಿಕಾರಕ್ಕಾಗಿ ಅವರನ್ನು ಅಭಿನಂದಿಸಿದೆ. ನಾವು ಪರಸ್ಪರ ಅನುಕೂಲಕರ ಮತ್ತು ವಿಶ್ವಾಸಾರ್ಹ ಪಾಲುದಾರಿಕೆಗೆ ಬದ್ಧರಾಗಿದ್ದೇವೆ. ನಮ್ಮ ಜನರ ಕಲ್ಯಾಣಕ್ಕಾಗಿ ಹಾಗೂ ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಭದ್ರತೆಗಾಗಿ ನಾವು ಒಟ್ಟಾಗಿ ಕಾರ್ಯನಿರ್ವಹಿಸುತ್ತೇವೆ.”

 

 

*****