Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಅವರು ಘೋಷಿಸಿದ್ದಾರೆ.

ಪಿಎಂಒ ಇಂಡಿಯಾ ಅಧಿಕೃತ ಖಾತೆಯಲ್ಲಿ ಈ ರೀತಿ ಪೋಸ್ಟ್ ಮಾಡಲಾಗಿದೆ:

“ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi” 

 

*****