Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ ನಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಉಭಯ ರಾಜ್ಯಗಳ ಸಂಸದರೊಂದಿಗೆ ಪರಿಶೀಲಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ ನ ಸಂಸತ್ ಸದಸ್ಯರನ್ನು ಭೇಟಿಯಾಗಿ ಎರಡೂ ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿಯ ಕುರಿತು ಚರ್ಚಿಸಿದರು.

ಪ್ರವಾಹದಿಂದ ಉದ್ಭವಿಸುವ ಸವಾಲುಗಳನ್ನು ಎದುರಿಸಲು ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳೊಂದಿಗೆ ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳು ಎಲ್ಲರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ: 

“ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ ನ ಸಂಸದರೊಂದಿಗೆ ಸಭೆ ನಡೆಸಿದೆ. ಪ್ರವಾಹದ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿನ ಪರಿಸ್ಥಿತಿಯ ಬಗ್ಗೆ ನಾವು ಮಾತನಾಡಿದ್ದೇವೆ. ಸವಾಲುಗಳನ್ನು ಎದುರಿಸಲು ಕೇಂದ್ರ ಸರ್ಕಾರವು ಆಯಾ ರಾಜ್ಯ ಸರ್ಕಾರಗಳೊಂದಿಗೆ ಕಾರ್ಯ ನಿರ್ವಹಿಸುವುದನ್ನು ಮುಂದುವರಿಸಲಿದೆ. ಎಲ್ಲರ ಯೋಗಕ್ಷೇಮ ಮತ್ತು ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ.”

 

 

*****