Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರ ನಿವಾಸಕ್ಕೆ ಭೇಟಿ ನೀಡಿ ಅವರನ್ನು ಮತ್ತು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರು ಭೇಟಿಯ ಸಮಯದಲ್ಲಿ ಶ್ರೀ ಪವನ್ ಕಲ್ಯಾಣ್ ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಅವರ ಉತ್ತಮ ಆರೋಗ್ಯ ಲಭಿಸಲಿ ಎಂದು ಶುಭ ಕೋರಿದರು.

ಪ್ರಧಾನಿ ಅವರು ತಮ್ಮ X ಪೋಸ್ಟ್‌ನಲ್ಲಿ ಭೇಟಿಯ ವಿವರಗಳನ್ನು ಹಂಚಿಕೊಂಡಿದ್ದಾರೆ;

”ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಪವನ್ ಕಲ್ಯಾಣ್ ಅವರ ನಿವಾಸಕ್ಕೆ ತೆರಳಿ, ಅವರನ್ನು ಮತ್ತು ಅವರ ಕುಟುಂಬವನ್ನು ಭೇಟಿ ಮಾಡಿದೆನು. ಪವನ್ ಕಲ್ಯಾಣ್ ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಿ ಅವರಿಗೆ ಉತ್ತಮ ಆರೋಗ್ಯ ದೊರಕಲಿ ಎಂದು ಶುಭ ಹಾರೈಸಿದೆನು.

@PawanKalyan”

 

*****