Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಂಧ್ರ ಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಕ್ಕೆ ಪ್ರಧಾನಮಂತ್ರಿ ಸಂತಾಪ


ಆಂಧ್ರ ಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದ ದುರ್ಘಟನೆಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪ ಸೂಚಿಸಿ, ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದರು.

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರು ಹಾಗೂ ಸಮೀಪದ ಬಂಧುಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF) ಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50,000 ನೀಡಲಾಗುವುದು ಎಂದು ಘೋಷಿಸಿದ್ದಾರೆ. 

ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಪೋಸ್ಟ್ ನಲ್ಲಿ ಇದನ್ನು ಬರೆಯಲಾಗಿದೆ;  

“ಆಂಧ್ರ ಪ್ರದೇಶದ ಮಾರ್ಕಾಪುರಂ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ದುರ್ಘಟನೆ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರದಲ್ಲೇ ಗುಣಮುಖರಾಗಲಿ.

ಮೃತರ ಹತ್ತಿರದ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi”

 

*****