Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಗಸ್ಟ್ 8ರಂದು ಐಐಟಿ ದೆಹಲಿಯ 57ನೇ ಘಟಿಕೋತ್ಸವ ಸಮಾರಂಭ ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026 , ಆಗಸ್ಟ್ 8  ರಂದು ಬೆಳಿಗ್ಗೆ 11 ಗಂಟೆಗೆ ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯ 57ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ  587 ಪಿಎಚ್.ಡಿ ವಿದ್ವಾಂಸರು ಸೇರಿದಂತೆ ಪದವಿ ಪಡೆಯಲಿರುವ 3000 ಕ್ಕೂ ಹೆಚ್ಚು  ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.

ಅತ್ಯುತ್ತಮ ಶೈಕ್ಷಣಿಕ ಉತ್ಕೃಷ್ಟತೆಯನ್ನು ಗುರುತಿಸಿ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಧ್ಯಕ್ಷರ  ಚಿನ್ನದ ಪದಕ, ನಿರ್ದೇಶಕರ ಚಿನ್ನದ ಪದಕ, ಶಂಕರ್ ದಯಾಳ್ ಶರ್ಮಾ ಚಿನ್ನದ ಪದಕ ಮತ್ತು ಪರ್ಫೆಕ್ಟ್ ಟೆನ್ ಚಿನ್ನದ ಪದಕ ಸೇರಿದಂತೆ ಸಂಸ್ಥೆಯ ಅತ್ಯಂತ ಪ್ರತಿಷ್ಠಿತ ಗೌರವಗಳನ್ನು ಪ್ರಧಾನಮಂತ್ರಿ ಅವರು ಪ್ರದಾನ ಮಾಡಲಿದ್ದಾರೆ.

ಅತ್ಯಾಧುನಿಕ ಸಂಶೋಧನೆ ಮತ್ತು ಕೃತಕ ಬುದ್ಧಿಮತ್ತೆಯನ್ನು ಮುನ್ನಡೆಸುವ ಭಾರತದ ಬದ್ಧತೆಯನ್ನು ಮತ್ತಷ್ಟು ಒತ್ತಿ ಹೇಳುವಂತೆ ಪ್ರಧಾನಮಂತ್ರಿಯವರು, ಐಐಟಿ ದೆಹಲಿಯ ಸೋನಿಪತ್ ಕ್ಯಾಂಪಸ್ನಲ್ಲಿ ಸ್ಥಾಪಿಸಲಾದ ಕೃತಕ ಬುದ್ಧಿಮತ್ತೆ ಚಾಲಿತ ಉನ್ನತ ಕಾರ್ಯಕ್ಷಮತೆಯ ಸೂಪರ್ ಕಂಪ್ಯೂಟಿಂಗ್ ಸೌಲಭ್ಯವಾದ ಪರಮ್ ಪ್ರಗ್ಯಾವನ್ನು ಉದ್ಘಾಟಿಸಲಿದ್ದಾರೆ. ಅತ್ಯಾಧುನಿಕ ಸೌಲಭ್ಯವು ಕೃತಕ ಬುದ್ಧಿಮತ್ತೆ, ದತ್ತಾಂಶ ವಿಜ್ಞಾನ, ಸುಧಾರಿತ ಕಂಪ್ಯೂಟಿಂಗ್ ಮತ್ತು ಅಂತರಶಿಸ್ತೀಯ ಸಂಶೋಧನೆಯಲ್ಲಿ ಸಂಸ್ಥೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುವ ನಿರೀಕ್ಷೆಯಿದೆ.

 

*****