ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬಂದು ಎಂಟು ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಅದರ ಸಾಧನೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ.
ಪ್ರತಿಯೊಬ್ಬ ಭಾರತೀಯರಿಗೂ ಅತ್ಯುತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆರೋಗ್ಯ ಸೇವೆಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಎಂಟು ವರ್ಷಗಳ ಹಿಂದೆ ಈ ಯೋಜನೆಯನ್ನು ಆರಂಭಿಸಲಾಯಿತು ಎಂದು ಪ್ರಧಾನಮಂತ್ರಿ ತಿಳಿಸಿದರು. ಇಂದು 60 ಕೋಟಿಗೂ ಅಧಿಕ ಫಲಾನುಭವಿಗಳು ವಾರ್ಷಿಕ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣಾ ಸೌಲಭ್ಯವನ್ನು ಪಡೆಯುತ್ತಿದ್ದು, ಇದು ವಿಶ್ವದ ಅತಿದೊಡ್ಡ ಆರೋಗ್ಯ ರಕ್ಷಣಾ ಯೋಜನೆಯಾಗಿದೆ ಎಂದು ಅವರು ಉಲ್ಲೇಖಿಸಿದರು. ಈ ಯೋಜನೆಯು ವೈದ್ಯಕೀಯ ವೆಚ್ಚಗಳಲ್ಲಿ ದಾಖಲೆಯ ಉಳಿತಾಯಕ್ಕೆ ಅವಕಾಶ ಕಲ್ಪಿಸಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಆರೋಗ್ಯ ಸೇವೆಗಳು ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪುತ್ತಿವೆ ಎಂದು ಪ್ರತಿಪಾದಿಸಿರುವ ಪ್ರಧಾನಮಂತ್ರಿ, ‘ಆಯುಷ್ಮಾನ್ ಆರೋಗ್ಯ ಮಂದಿರ’ಗಳಿಗೆ ಈಗಾಗಲೇ ಫಲಾನುಭವಿಗಳ 500 ಕೋಟಿಗೂ ಅಧಿಕ ಭೇಟಿಗಳು ದಾಖಲಾಗಿವೆ ಮತ್ತು ಇದು ತಳಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲವರ್ಧನೆಗೊಳಿಸಿದೆ ಎಂದು ಉಲ್ಲೇಖಿಸಿದರು. ಅಲ್ಲದೆ, ಅವರು ಎಲ್ಲಾ ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಪ್ರತಿಯೊಬ್ಬ ಭಾರತೀಯರಿಗೂ ಅತ್ಯುತ್ತಮ ಗುಣಮಟ್ಟದ ಮತ್ತು ಕೈಗೆಟುಕುವ ದರದ ಆರೋಗ್ಯ ಸೇವೆಗಳು ಲಭ್ಯವಾಗಬೇಕೆಂಬ ಉದ್ದೇಶದಿಂದ ಎಂಟು ವರ್ಷಗಳ ಹಿಂದೆ ‘ಆಯುಷ್ಮಾನ್ ಭಾರತ್’ ಯೋಜನೆಯನ್ನು ಜಾರಿಗೊಳಿಸಲಾಯಿತು.
ಇಂದು 60 ಕೋಟಿಗೂ ಅಧಿಕ ಫಲಾನುಭವಿಗಳು ವಾರ್ಷಿಕ 5 ಲಕ್ಷ ರೂಪಾಯಿಗಳ ಆರೋಗ್ಯ ರಕ್ಷಣಾ ಸೌಲಭ್ಯವನ್ನು ಪಡೆಯುತ್ತಿದ್ದು, ಇದು ಜಗತ್ತಿನಲ್ಲಿಯೇ ಅತಿದೊಡ್ಡ ಆರೋಗ್ಯ ಯೋಜನೆಯಾಗಿದೆ.
ಈ ಯೋಜನೆಯು ವೈದ್ಯಕೀಯ ವೆಚ್ಚದಲ್ಲಿ ದಾಖಲೆ ಮಟ್ಟದ ಉಳಿತಾಯಕ್ಕೆ ಅವಕಾಶ ಕಲ್ಪಿಸಿದ್ದು, ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ಅಲ್ಲದೆ, ಆರೋಗ್ಯ ಸೇವೆಗಳು ಜನರ ಮನೆಬಾಗಿಲಿಗೆ ತಲುಪುತ್ತಿವೆ. ‘ಆಯುಷ್ಮಾನ್ ಆರೋಗ್ಯ ಮಂದಿರ’ಗಳಲ್ಲಿ ಈಗಾಗಲೇ ಫಲಾನುಭವಿಗಳ 500 ಕೋಟಿಗೂ ಅಧಿಕ ಭೇಟಿಗಳು ದಾಖಲಾಗಿವೆ, ಇದು ತಳಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಸೇವೆಯನ್ನು ಬಲವರ್ಧನೆಗೊಳಿಸಿದೆ.
ಆಯುಷ್ಮಾನ್ ಭಾರತ್ ಯೋಜನೆಯ ಎಲ್ಲಾ ಫಲಾನುಭವಿಗಳಿಗೆ ನನ್ನ ಶುಭಾಶಯಗಳು.”
#8YearsOfAyushmanBharat”
*****
Eight years ago, Ayushman Bharat was rolled out with the idea that every Indian should have access to top-quality and affordable healthcare.
— Narendra Modi (@narendramodi) September 23, 2026
Today, more than 60 crore beneficiaries have access to Rs. 5 lakh annual health cover, making it the largest healthcare scheme in the… https://t.co/K7bWTRNlLM