Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಇರಾನ್ ನಡುವಿನ ತಿಳಿವಳಿಕೆ ಒಪ್ಪಂದಕ್ಕೆ ಸಂಪುಟದ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಆರೋಗ್ಯ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಮತ್ತು ಇರಾನ್ ನಡುವೆ ಆಗಿರುವ ತಿಳಿವಳಿಕೆ ಒಪ್ಪಂದಕ್ಕೆ ಪೂರ್ವಾನ್ವಯವಾಗಿ ತನ್ನ ಅನುಮೋದನೆ ನೀಡಿದೆ. ಇರಾನ್ ನ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2018ರ ಫೆಬ್ರವರಿ 17ರಂದು ಈ ತಿಳಿವಳಿಕೆ ಒಪ್ಪಂದಕ್ಕೆ ಅಂಕಿತ ಹಾಕಲಾಗಿತ್ತು. 

 

ಈ ತಿಳಿವಳಿಕೆ ಒಪ್ಪಂದವು ಎರಡೂ ದೇಶಗಳ ನಡುವೆ ಸಹಕಾರವನ್ನು ಉತ್ತೇಜಿಸಲಿದ್ದು, ಅವೆರಡರ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಬಲಪಡಿಸಲಿದೆ. 

 

ಈ ತಿಳಿವಳಿಕೆ ಒಪ್ಪಂದವು ಈ ಕೆಳಗಿನ ಕ್ಷೇತ್ರಗಳ ಸಹಕಾರಗಳಿಗೆ ಅನ್ವಯಿಸುತ್ತದೆ:-

 

  1. ವೈದ್ಯರ ಮತ್ತು ಇತರ ಆರೋಗ್ಯ ವೃತ್ತಿಪರರ ತರಬೇತಿಯಲ್ಲಿ ಅನುಭವದ ವಿನಿಮಯ; 
  2. ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಆರೋಗ್ಯ ಸೇವಾ ಸೌಲಭ್ಯ ಸ್ಥಾಪನೆಗೆ ನೆರವು;
  3. ಔಷಧಗಳು, ವೈದ್ಯಕೀಯ ಸಾಧನ ಸಲಕರಣೆ ಮತ್ತು ಪ್ರಸಾದನಗಳ ನಿಯಂತ್ರಣ ಮತ್ತು ಆ ಕುರಿತ ಮಾಹಿತಿಯ ವಿನಿಮಯ;
  4. ವೈದ್ಯಕೀಯ ಸಂಶೋಧನೆ, ಹೊಸ ತಂತ್ರಜ್ಞಾನ ಮತ್ತು ಜ್ಞಾನಾಧಾರಿತ ಉಪಕ್ರಮಗಳ ಕ್ಷೇತ್ರದಲ್ಲಿನ ಸಹಕಾರ;
  5. ಸಾರ್ವಜನಿಕ ಆರೋಗ್ಯ, ಸುಸ್ಥಿರ ಅಭಿವೃದ್ಧಿ ಗುರಿಗಳು (ಎಸ್.ಡಿ.ಜಿ.ಗಳು) ಮತ್ತು ಅಂತಾರಾಷ್ಟ್ರೀಯ ಆರೋಗ್ಯದಲ್ಲಿನ ಸಹಕಾರ;ಮತ್ತು
  6. ಪರಸ್ಪರರ ನಿರ್ಧರಿಸುವ ಇನ್ನಾವುದೇ ಕ್ಷೇತ್ರದ ಸಹಕಾರ.

 

ಸಹಕಾರದ ವಿವರಗಳನ್ನು ವಿಸ್ತಾರವಾಗಿ ತಿಳಿಸಲು ಮತ್ತು ತಿಳಿವಳಿಕೆ ಒಪ್ಪಂದದ ಅನುಷ್ಠಾನದ ಮೇಲುಸ್ತುವಾರಿಗಾಗಿ ಒಂದು ಕಾರ್ಯಪಡೆಯನ್ನು ಸ್ಥಾಪಿಸಲಾಗುತ್ತದೆ.