Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆರೋಗ್ಯ ವಲಯದಲ್ಲಿ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಇಂಡೋನೇಷ್ಯಾ ನಡುವಿನ ಒಡಂಬಡಿಕೆಗೆ ಸಂಪುಟ ಅನುಮೋದನೆ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ವಲಯದಲ್ಲಿ ಸಹಕಾರಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಇಂಡೋನೇಷ್ಯಾ ನಡುವಿನ ಒಡಂಬಡಿಕೆಗೆ ಸಹಿ ಹಾಕಲು ಅನುಮೋದನೆ ನೀಡಲಾಯಿತು.

ಆ ಒಪ್ಪಂದದನ್ವಯ ಈ ಕೆಳಗಿನ ವಲಯಗಳಲ್ಲಿ ಪರಸ್ಪರ ಸಹಕಾರ ಏರ್ಪಡಲಿದೆ.

ಎ. ಸಂಶೋಧನೆ ಮತ್ತು ಅಭಿವೃದ್ಧಿ, ಆಕ್ಟಿವ್ ಫಾರ್ಮಸಿಟಿಕಲ್ ಇನ್ ಗ್ರಿಡಿಯೆಂಟ್ಸ್(ಎಪಿಐ) ಮತ್ತು ಐಟಿ ಆಧಾರಿತ ವೈದ್ಯಕೀಯ ಉಪಕರಣ

ಬಿ. ಮಾನವ ಸಂಪನ್ಮೂಲ ಅಭಿವೃದ್ಧಿ

ಸಿ. ಆರೋಗ್ಯ ಸೇವೆಗಳು ಮತ್ತು

ಡಿ. ಪರಸ್ಪರ ಒಪ್ಪಿದ ಇತರೆ ಯಾವುದಾದರೂ ವಲಯಗಳಲ್ಲಿ ಒಪ್ಪಂದದ ಅನುಷ್ಠಾನದ ಬಗ್ಗೆ ನಿಗಾವಹಿಸಲು ಮತ್ತು ಸಹಕಾರದ ವಿವರಗಳನ್ನು ಮತ್ತಷ್ಟು ವಿಸ್ತೃತಗೊಳಿಸುವ ಬಗ್ಗೆ ಕಾರ್ಯಕಾರಿ ಸಮಿತಿಯನ್ನು ರಚಿಸಲಾಗುವುದು.