Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಆಸ್ಟ್ರೇಲಿಯಾ ಪ್ರಧಾನಮಂತ್ರಿಯವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಪ್ರಧಾನಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ಆಸ್ಟ್ರೇಲಿಯಾ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾಲ್ಕಮ್ ಟರ್ನ್ ಬುಲ್ ಅವರಿಗೆ ದೂರವಾಣಿ ಕರೆ ಮಾಡಿ ಅವರಿಗೆ ದೀಪಾವಳಿಯ ಶುಭಾಶಯ ಸಲ್ಲಿಸಿದರು.

ಆಸ್ಟ್ರೇಲಿಯಾದಲ್ಲಿ ಇತ್ತೀಚೆಗೆ ಭಾರತೀಯ ಮೂಲದ ವ್ಯಕ್ತಿ ಶ್ರೀ ಮನ್ ಮೀತ್ ಆಲಿಷರ್ ಅವರ ಭೀಕರ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ವ್ಯಕ್ತವಾಗಿರುವ ವ್ಯಾಕುಲತೆಯನ್ನು ಅವರಿಗೆ ತಿಳಿಸಿದರು.

ಹತ್ಯೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿದ ಪ್ರಧಾನಿ ಟರ್ನ್ ಬುಲ್ ಅವರು ಘಟನೆಯ ಬಗ್ಗೆ ತನಿಖೆ ನಡೆಸುವುದಾಗಿ ತಿಳಿಸಿದರು.

2017ರಲ್ಲಿ ಭಾರತಕ್ಕೆ ಭೇಟಿ ನೀಡುವ ಕುರಿತಂತೆ ಪ್ರಧಾನಮಂತ್ರಿ ಟರ್ನ್ ಬುಲ್ ಅವರಿಗೆ ಪ್ರಧಾನಿ ಮರು ಆಹ್ವಾನ ನೀಡಿದರು.

AKT/NT