Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಮಂತ್ರಿ 

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ಪ್ರಧಾನಮಂತ್ರಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 16ರಿಂದ 17ರವರೆಗೆ ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿ ಕೈಗೊಂಡರು. ಇಂದು ಅಡಿಸ್ ಇಂಟರ್‌ನ್ಯಾಷನಲ್‌ ಕನ್ವೆನ್ಷನ್ ಸೆಂಟರ್‌ಲ್ಲಿ ಆಯೋಜಿಸಿದ್ದ ವಿಶೇಷ ಸಮಾರಂಭದಲ್ಲಿ, ಇಥಿಯೋಪಿಯಾದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರು ಭಾರತ-ಇಥಿಯೋಪಿಯಾ ಪಾಲುದಾರಿಕೆಯನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆ ನೀಡಿದ ಹಾಗೂ ಜಾಗತಿಕ ರಾಜಕಾರಣಿಯಾಗಿ ದೂರದೃಷ್ಟಿಯ ನಾಯಕತ್ವಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿಯಾದ ‘ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’ ಅನ್ನು ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಮೋದಿಯವರು, ವಿಶ್ವದ ಅತ್ಯಂತ ಪುರಾತನ ನಾಗರಿಕತೆಗಳಲ್ಲಿ ಒಂದಾದ ಇಥಿಯೋಪಿಯಾದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ತಮಗೆ ಗೌರವದ ಸಂಗತಿಯಾಗಿದೆ ಎಂದರು. ಅತ್ಯಂತ ನಮ್ರತೆ ಮತ್ತು ಕೃತಜ್ಞತೆಯಿಂದ ಈ ಪ್ರಶಸ್ತಿ ಸ್ವೀಕರಿಸಿದ್ದಾಗಿ ಹೇಳಿದರು. ಈ ಗೌರವಕ್ಕಾಗಿ ಪ್ರಧಾನಮಂತ್ರಿ ಮೋದಿ ಅವರು ಪ್ರಧಾನಮಂತ್ರಿ ಡಾ. ಅಬಿ ಮತ್ತು ಇಥಿಯೋಪಿಯಾದ ಜನರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದರು. ರಾಷ್ಟ್ರೀಯ ಏಕತೆ, ಸುಸ್ಥಿರತೆ ಮತ್ತು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯನ್ನು ಉತ್ತೇಜಿಸಲು ಪ್ರಧಾನಮಂತ್ರಿ ಡಾ. ಅಬಿ ಅವರ ನಾಯಕತ್ವ ಮತ್ತು ಅವರ ಉಪಕ್ರಮಗಳ ಬಗ್ಗೆ ಶ್ರೀ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರಾಷ್ಟ್ರ ನಿರ್ಮಾಣದಲ್ಲಿ ಜ್ಞಾನದ ಮಹತ್ವವನ್ನು ಒತ್ತಿ ಹೇಳಿದ ಪ್ರಧಾನಮಂತ್ರಿ ಮೋದಿ, ಇಥಿಯೋಪಿಯಾದ ಪ್ರಗತಿ ಮತ್ತು ಅಭಿವೃದ್ಧಿಗೆ ಕೊಡುಗೆ ನೀಡುವುದು ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಭಾರತೀಯ ಶಿಕ್ಷಕರಿಗೆ ಸಂದ ಸೌಭಾಗ್ಯ ಎಂದು ಹೇಳಿದರು.

ಹಲವು ಶತಮಾನಗಳಿಂದ ದ್ವಿಪಕ್ಷೀಯ ಸಂಬಂಧವನ್ನು ಪೋಷಿಸಿದ ಭಾರತೀಯರು ಮತ್ತು ಇಥಿಯೋಪಿಯನ್ನರಿಗೆ ಪ್ರಧಾನಮಂತ್ರಿ ಮೋದಿ ಈ ಪ್ರಶಸ್ತಿಯನ್ನು ಸಮರ್ಪಿಸಿದರು ಮತ್ತು ಈ ಗೌರವವನ್ನು ಪಡೆದಿದ್ದಕ್ಕಾಗಿ 1.4 ಶತಕೋಟಿ ಭಾರತೀಯರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸಿದರು. ಈ ಪ್ರಶಸ್ತಿಯ ಪ್ರದಾನವು ಭಾರತ ಮತ್ತು ಇಥಿಯೋಪಿಯಾ ನಡುವಿನ ನಿಕಟ ಪಾಲುದಾರಿಕೆಯಲ್ಲಿ ಮತ್ತು ಜಾಗತಿಕ ದಕ್ಷಿಣದ ಸಕಾರಾತ್ಮಕ ಕಾರ್ಯಸೂಚಿಯನ್ನು ಹೆಚ್ಚಿಸುವಲ್ಲಿ ಒಂದು ಮೈಲುಗಲ್ಲಾಗಿದೆ. ಪ್ರಧಾನಮಂತ್ರಿಯವರ ಪೂರ್ಣ ಹೇಳಿಕೆಗಳನ್ನು ಇಲ್ಲಿ ನೋಡಬಹುದು. [ಲಿಂಕ್]

 

*****