Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಜಯ ಗಳಿಸಿದ ಬೆಂಜಮಿನ್ ನೆತನ್ಯಾಹು ಅವರನ್ನು ಅಭಿನಂದಿಸಿದ ಪ್ರಧಾನಿ ಮೋದಿ 


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ವಿಜಯಕ್ಕಾಗಿ ಬೆಂಜಮಿನ್ ನೆತನ್ಯಾಹು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ಆದ್ಯತೆ ನೀಡಿದ್ದಕ್ಕಾಗಿ ಪ್ರಧಾನಮಂತ್ರಿ ಯಾಯಿರ್‌ ಲಾಪಿಡ್ ಅವರಿಗೂ ಶ್ರೀ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ಹೀಗೆ ಹೇಳಿದ್ದಾರೆ:

“ಚುನಾವಣಾ ವಿಜಯಕ್ಕಾಗಿ ನನ್ನ ಸ್ನೇಹಿತ ನೆತನ್ಯಾಹುhttp://@netanyahu ಅವರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಯನ್ನು ಆಳಗೊಳಿಸಲು ನಮ್ಮ ಜಂಟಿ ಪ್ರಯತ್ನಗಳನ್ನು ಮುಂದುವರಿಸಲು ನಾನು ಕಾತುರನಾಗಿದ್ದೇನೆ.ʼʼ

“ಭಾರತ-ಇಸ್ರೇಲ್ ವ್ಯೂಹಾತ್ಮಕ ಪಾಲುದಾರಿಕೆಗೆ ನಿಮ್ಮ ಆದ್ಯತೆಗಾಗಿ ಯಾಯಿರ್‌ ಲಾಪಿಡ್‌ http://@yairlapidಅವರಿಗೂ ಧನ್ಯವಾದಗಳು. ನಮ್ಮ ಜನರ ಪರಸ್ಪರ ಲಾಭಕ್ಕಾಗಿ ನಮ್ಮ ಫಲಪ್ರದವಾದ ವಿಚಾರಗಳ ವಿನಿಮಯವನ್ನು ಮುಂದುವರಿಸಲು ನಾನು ಆಶಿಸುತ್ತೇನೆ.”

*****