Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರಕಾಶಿ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ಪ್ರಧಾನಿ ಸಂತಾಪ; ಅಪಘಾತದ ಸಂತ್ರಸ್ತರಿಗೆ ಪರಿಹಾರ ಘೋಷಣೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉತ್ತರಾಖಂಡದ ಉತ್ತರ ಕಾಶಿಯ ಬಸ್ ಅಪಘಾತದಲ್ಲಿ ಆದ ಸಾವು ನೋವಿಗೆ ದುಃಖ ವ್ಯಕ್ತಪಡಿಸಿದ್ದಾರೆ.
“ಉತ್ತರಕಾಶಿಯ ಬಸ್ ಅಪಘಾತದಲ್ಲಿತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಪ್ರಾರ್ಥನೆ ಮತ್ತು ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.”, ಎಂದು ಪ್ರಧಾನಿ ತಿಳಿಸಿದ್ದಾರೆ.

ಬಸ್ ಅಪಘಾತದಲ್ಲಿ ಸಾವನ್ನಪ್ಪಿದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿಗಳ ಪರಿಹಾರವನ್ನು ಪಿ.ಎಂ.ಎನ್.ಆರ್.ಎಫ್.ನಿಂದ ಪ್ರಧಾನಿ ಘೋಷಿಸಿದ್ದಾರೆ.

****

AKT/NT