Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರಖಂಡದ ಚಮೋಲಿಯ ಹಿಮಪ್ರವಾಹ ಸಂತ್ರಸ್ತರಿಗೆ ಪರಿಹಾರ ಅನುಮೋದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹಿಮಗಡ್ಡೆ ಕುಸಿದು ಸಂಭವಿಸಿದ ಹಿಮ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಅನುಮೋದಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಮೊತ್ತವನ್ನೂ ಅವರು ಅನುಮೋದಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಟ್ವೀಟ್ ನಲ್ಲಿ, “PM @narendramodi  ಅವರು ಉತ್ತರಖಂಡದ ಚಮೋಲಿಯಲ್ಲಿ ಹಿಮಗಡ್ಡೆ ಕುಸಿದು ಉಂಟಾದ ದುರಂತಮಯ ಹಿಮಪ್ರವಾಹದಲ್ಲಿ ಮೃತಪಟ್ಟವರ ಹತ್ತಿರದ ಬಂಧುಗಳಿಗೆ ಪಿಎಂಎನ್.ಆರ್.ಎಫ್.ನಿಂದ ತಲಾ 2 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಅನುಮೋದಿಸಿದ್ದಾರೆ.” ಎಂದು ತಿಳಿಸಲಾಗಿದೆ.

***