Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಬರೇಲಿಯ ಬಸ್ ಅಪಘಾತದಲ್ಲಾದ ಜೀವಹಾನಿಗೆ ಪ್ರಧಾನಿ ಸಂತಾಪ; ಅಪಘಾತದಲ್ಲಿ ಸಂತ್ರಸ್ತರಾದವರಿಗೆ ಪರಿಹಾರ ಘೋಷಣೆ


ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬರೇಲಿಯಲ ಬಸ್ ಅಪಘಾತದಲ್ಲಿ ಆದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

“ಉತ್ತರ ಪ್ರದೇಶದ ಬರೇಲಿಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕ. ನಾನು ಜೀವಹಾನಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ”, ಎಂದು ಪ್ರಧಾನಿ ತಿಳಿಸಿದ್ದಾರೆ.

ಅಪಘಾತದಲ್ಲಿ ಮಡಿದವರ ಹತ್ತಿರದ ಬಂಧುಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾವರನ್ನು ಪಿ.ಎಂ.ಎನ್.ಆರ್.ಎಫ್.ನಿಂದ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.

***

AKT/NT