ಪಿಎಂಇಂಡಿಯಾ
ಪ್ರಧಾನಮಂತ್ರಿ ಅವರು, ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಶೋಕ ವ್ಯಕ್ತಪಡಿಸಿದ್ದಾರೆ. ಈ ದುರಂತ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪಗಳನ್ನು ಸೂಚಿಸಿರುವ ಪ್ರಧಾನಮಂತ್ರಿ ಅವರು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.
ಮೃತರ ಪ್ರತಿ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಂದ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಮಂತ್ರಿ ಘೋಷಿಸಿದರು.
ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪಿ.ಎಂ.ಎನ್.ಆರ್.ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದು: PM @narendramodi’’
*****
Deeply anguished by the loss of lives due to the mishap in Mirzapur, Uttar Pradesh. My heartfelt condolences to the bereaved families. Praying for the quick recovery of the injured.
— PMO India (@PMOIndia) April 23, 2026
An ex gratia of Rs. 2 lakh from PMNRF would be given to the next of kin of each of those who lost…