ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ಮೃತರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್ಆರ್ಎಫ್ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ನಲ್ಲಿ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;
“ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕೇಳಿ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ.
ಮೃತರ ಪ್ರತಿಯೊಬ್ಬ ಸಂಬಂಧಿಕರಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi’’
*****
Deeply pained to hear about a mishap in Lakhimpur Kheri, Uttar Pradesh. My condolences to those who have lost their loved ones. May the injured recover at the earliest.
— PMO India (@PMOIndia) May 18, 2026
An ex-gratia of Rs. 2 lakh from PMNRF would be given to the next of kin of each deceased. The injured would be…