Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಅವರು, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಶ್ರೀ ನರೇಂದ್ರ ಮೋದಿ ಅವರು ಮೃತರ ಹತ್ತಿರದ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ ನಿಧಿಯಿಂದ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಅಪಘಾತದ ಬಗ್ಗೆ ಕೇಳಿ ತೀವ್ರ ನೋವುಂಟಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ.

ಮೃತರ ಪ್ರತಿಯೊಬ್ಬ ಸಂಬಂಧಿಕರಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು: ಪ್ರಧಾನಮಂತ್ರಿ @narendramodi’’

 

*****