Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ವಿಕಸಿತ ಭಾರತವನ್ನು ನಿರ್ಮಿಸುವ ಸಾಮೂಹಿಕ ಕನಸನ್ನು ಬಲವರ್ಧನೆಗೊಳಿಸಲು ಉಪರಾಷ್ಟ್ರಪತಿಗಳು ಹಲವು ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿಯವರು ಉಲ್ಲೇಖಿಸಿದರು. ಸಂಸದೀಯ ಕಲಾಪಗಳ ಉತ್ತಮ ರೀತಿಯಲ್ಲಿ ನಿರ್ವಹಿಸುವಂತೆ ಮಾಡಲು ಮತ್ತು ಅದರ ಪರಿಣಾಮ ಹೆಚ್ಚಳಕ್ಕೆ ನಿರಂತರ ಪ್ರಯತ್ನಗಳನ್ನು ಕೈಗೊಳ್ಳುತ್ತಿರುವುದು ಸಂಸದೀಯ ಮೌಲ್ಯಗಳಿಗೆ ಅವರ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಶ್ರೀ ನರೇಂದ್ರ ಮೋದಿ ಅವರು ಪ್ರಮುಖವಾಗಿ ಪ್ರಸ್ತಾಪಿಸಿದರು.

ಬಡವರು ಮತ್ತು ಸಮಾಜದ ಅಂಚಿನಲ್ಲಿರುವವರ ಬಗ್ಗೆ ಕಾಳಜಿಯೊಂದಿಗೆ ಸರ್ವತೋಮುಖ ಅಭಿವೃದ್ಧಿಗಾಗಿ ಉಪರಾಷ್ಟ್ರಪತಿಯವರ ಅಚಲ ಉತ್ಸಾಹವು ಅಷ್ಟೇ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅವರ ಸಾರ್ವಜನಿಕ ಜೀವನವು ಬದ್ಧತೆ, ಶಿಸ್ತು ಮತ್ತು ಸ್ಪಷ್ಟ ಉದ್ದೇಶದ ಪ್ರಜ್ಞೆಯಿಂದ ಮಾರ್ಗದರ್ಶಿಸಲ್ಪಡುತ್ತಿದೆ ಎಂದು ಒತ್ತಿ ಹೇಳಿರುವ ಶ್ರೀ ನರೇಂದ್ರ ಮೋದಿ, ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ರಾಷ್ಟ್ರದ ಸೇವೆಯಲ್ಲಿ ದೀರ್ಘಾಯುಷ್ಯ ಲಭಿಸಲಿ ಎಂದು ಪ್ರಾರ್ಥಿಸಿದರು.

ಪ್ರಧಾನಮಂತ್ರಿ ಅವರು ತಮ್ಮ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;

“ಉಪರಾಷ್ಟ್ರಪತಿ ತಿರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ವಿಕಸಿತ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಕನಸನ್ನು ಬಲಪಡಿಸಲು ಅವರು ಹಲವು ಪ್ರಯತ್ನಗಳನ್ನು ಕೈಗೊಂಡಿದ್ದಾರೆ. ನಮ್ಮ ಸಂಸದೀಯ ಕಲಾಪಗಳ ಉತ್ಪಾದಕತೆ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಅವರ ನಿರಂತರ ಪ್ರಯತ್ನಗಳು ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅವರ ಆಳವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ. ಬಡವರು ಮತ್ತು ಸಮಾಜದ ಅಂಚಿನಲ್ಲಿರುವವರ ಬಗ್ಗೆ ಕಾಳಜಿಯೊಂದಿಗೆ ಸರ್ವತೋಮುಖ ಅಭಿವೃದ್ಧಿಗಾಗಿ ಅವರ ಅಚಲವಾದ ಉತ್ಸಾಹವು ಅಷ್ಟೇ ಸ್ಪೂರ್ತಿದಾಯಕವಾಗಿದೆ. ಅವರ ಸಾರ್ವಜನಿಕ ಜೀವನವು ಬದ್ಧತೆ, ಶಿಸ್ತು ಮತ್ತು ಸ್ಪಷ್ಟ ಉದ್ದೇಶದ ಪ್ರಜ್ಞೆಯಿಂದ ಮಾರ್ಗದರ್ಶಿಸಲ್ಪಡುತ್ತಿದೆ. ಅವರಿಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ರಾಷ್ಟ್ರದ ಸೇವೆಯಲ್ಲಿ ದೀರ್ಘಾಯುಷ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ.’’

 

*****