ಪಿಎಂಇಂಡಿಯಾ
ಏಷ್ಯನ್ ಕ್ರೀಡಾಕೂಟದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿ ಸ್ಪರ್ಧೆಯ ಫೈನಲ್‌ನಲ್ಲಿ ರೋಚಕ ಜಯ ಸಾಧಿಸಿ ಚಿನ್ನದ ಪದಕ ಗೆದ್ದ ಸುಜೀತ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ತಮ್ಮ ಚೊಚ್ಚಲ ಏಷ್ಯನ್ ಕ್ರೀಡಾಕೂಟದಲ್ಲಿಯೇ ಸುಜೀತ್ ಅವರು ಈ ಆವೃತ್ತಿಯಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ ಎಂದು ಪ್ರಧಾನಿ ಹೇಳಿದರು. ಅವರು ಇದನ್ನು ಸ್ಮರಣೀಯ ಜಯ ಎಂದು ಬಣ್ಣಿಸಿದರು.
ಶ್ರೀ ಮೋದಿ ಅವರು ಸುಜೀತ್ ಅವರ ಮುಂದಿನ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ‘ಎಕ್ಸ್’ ಪೋಸ್ಟ್‌ನಲ್ಲಿ ಹೀಗೆ ಹೇಳಿದೆ:
“ಏಷ್ಯನ್ ಕ್ರೀಡಾಕೂಟದ ಫೈನಲ್‌ನಲ್ಲಿ ರೋಚಕ ಜಯದೊಂದಿಗೆ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿಯಲ್ಲಿ ಚಿನ್ನದ ಪದಕ ಗೆದ್ದ ಸುಜೀತ್ ಅವರಿಗೆ ಅಭಿನಂದನೆಗಳು. ತಮ್ಮ ಚೊಚ್ಚಲ ಏಷ್ಯನ್ ಕ್ರೀಡಾಕೂಟದಲ್ಲಿಯೇ ಅವರು ಈ ಆವೃತ್ತಿಯಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದಾರೆ. ಇದು ನಿಜಕ್ಕೂ ಸ್ಮರಣೀಯ ಜಯ! ಅವರ ಮುಂದಿನ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi“
*****
Congratulations to Sujeet on winning the Men’s 65kg Freestyle Wrestling Gold at the Asian Games after a thrilling victory in the final. On his Asian Games debut, he has delivered India’s first Wrestling Gold of this edition. It is indeed a memorable triumph! Wishing him the very…
— PMO India (@PMOIndia) October 2, 2026