Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಶೀತಲ್ ದೇವಿ ಮತ್ತು ಪಾಯಲ್ ನಾಗ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದ ಮಹಿಳಾ ಪ್ಯಾರಾ ಕಾಂಪೌಂಡ್ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಶೀತಲ್ ದೇವಿ ಮತ್ತು ಪಾಯಲ್ ನಾಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ.

ದೇಶಕ್ಕೆ ಹೆಮ್ಮೆ ತರುವಂತಹ ಅತ್ಯುತ್ತಮ ತಂಡದ ಸಹಕಾರ ಮತ್ತು ಕ್ರೀಡಾ ನೈಪುಣ್ಯವನ್ನು ಪ್ರದರ್ಶಿಸಿದ್ದಕ್ಕಾಗಿ ಶ್ಲಾಘಿಸಿದ ಶ್ರೀ ಮೋದಿ ಅವರು, ಈ ಇಬ್ಬರೂ ಕ್ರೀಡಾಪಟುಗಳ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ‘ಎಕ್ಸ್’ ಪೋಸ್ಟ್ ನಲ್ಲಿ:

“ಅತ್ಯುತ್ತಮ ತಂಡದ ಸಹಕಾರ ಮತ್ತು ಕ್ರೀಡಾ ನೈಪುಣ್ಯದ ಪ್ರದರ್ಶನ!

2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದ ಮಹಿಳಾ ಪ್ಯಾರಾ ಕಾಂಪೌಂಡ್ ಡಬಲ್ಸ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಶೀತಲ್ ದೇವಿ ಮತ್ತು ಪಾಯಲ್ ನಾಗ್ ಅವರಿಗೆ ಅಭಿನಂದನೆಗಳು! ಈ ಇಬ್ಬರೂ ಕ್ರೀಡಾಪಟುಗಳು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು: ಪ್ರಧಾನಮಂತ್ರಿ @narendramodi”

 

*****