Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ರಾಹುಲ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಹೈ ಜಂಪ್ (ಎತ್ತರ ಜಿಗಿತ) T42/T63 ವಿಭಾಗದಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಕ್ಕಾಗಿ ರಾಹುಲ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಇದು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ ಶ್ರೀ ಮೋದಿ, ರಾಹುಲ್ ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಆಶಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯವು ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:

“2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ರಾಹುಲ್ ಅವರಿಗೆ ಇದೊಂದು ಹೆಮ್ಮೆಯ ಕ್ಷಣ! ಅವರು ಪುರುಷರ ಹೈ ಜಂಪ್ T42/T63 ವಿಭಾಗದಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಕಂಚಿನ ಪದಕವನ್ನು ಗೆದ್ದಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಏರಲಿ ಎಂದು ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****