Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ವರುಣ್ ಸಿಂಗ್ ಭಾಟಿಯವರಿಗೆ ಪ್ರಧಾನಮಂತ್ರಿ ಅಭಿನಂದನೆ


2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಹೈ ಜಂಪ್ (ಎತ್ತರ ಜಿಗಿತ) T42/T63 ವಿಭಾಗದಲ್ಲಿ ಶ್ಲಾಘನೀಯ ಜಿಗಿತದೊಂದಿಗೆ ಬೆಳ್ಳಿ ಪದಕ ಗೆದ್ದ ವರುಣ್ ಸಿಂಗ್ ಭಾಟಿಯವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿಯವರ ಕಾರ್ಯಾಲಯವು ‘ಎಕ್ಸ್’ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ.

“ವರುಣ್ ಸಿಂಗ್ ಭಾಟಿ ಅವರು ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ತಮ್ಮ ಛಾಪು ಮೂಡಿಸುವುದನ್ನು ಮುಂದುವರಿಸಿದ್ದಾರೆ! ಅವರು 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಪುರುಷರ ಹೈ ಜಂಪ್ T42/T63 ವಿಭಾಗದಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ವರುಣ್ ಅವರ ಈ ಸಾಧನೆಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****