Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ತೇಜಸ್ ನಂದಕುಮಾರ್‌ಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ, ಪುರುಷರ 100 ಮೀಟರ್ ಬ್ಯಾಕ್‌ಸ್ಟ್ರೋಕ್ S7 ವಿಭಾಗದಲ್ಲಿ ಕಂಚಿನ ಪದಕ ಗೆದ್ದ ತೇಜಸ್ ನಂದಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ತೇಜಸ್ ಅವರ ದೃಢ ನಿಶ್ಚಯ, ಕಠಿಣ ಪರಿಶ್ರಮ ಮತ್ತು ತಮ್ಮ ಪ್ರದರ್ಶನವನ್ನು ಸುಧಾರಿಸಿಕೊಳ್ಳುವಲ್ಲಿನ ಬದ್ಧತೆ ಶ್ಲಾಘನೀಯ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದ್ದಾರೆ. ಅಲ್ಲದೇ, ಮುಂಬರುವ ಸ್ಪರ್ಧೆಗಳಲ್ಲಿ ಅವರು ಉತ್ತಮ ಸಾಧನೆ ಮಾಡಲಿ ಎಂದು ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯವು ‘ಎಕ್ಸ್’ ನಲ್ಲಿ ಹೀಗೆ ಹಂಚಿಕೊಂಡಿದೆ.

“ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ, ಪುರುಷರ 100 ಮೀಟರ್ ಬ್ಯಾಕ್‌ಸ್ಟ್ರೋಕ್ S7 ವಿಭಾಗದಲ್ಲಿ ತೇಜಸ್ ನಂದಕುಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಅವರ ದೃಢ ನಿಶ್ಚಯ, ಕಠಿಣ ಪರಿಶ್ರಮ ಮತ್ತು ತಮ್ಮ ಪ್ರದರ್ಶನವನ್ನು ಸುಧಾರಿಸಿಕೊಳ್ಳುವಲ್ಲಿನ ಬದ್ಧತೆ ಶ್ಲಾಘನೀಯ. ಈ ಸಾಧನೆಗಾಗಿ ತೇಜಸ್ ಅವರಿಗೆ ಅಭಿನಂದನೆಗಳು. ಮುಂಬರುವ ಸ್ಪರ್ಧೆಗಳಿಗೆ ಅವರಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****