Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸಂಜನಾ ಕುಮಾರಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಏಷ್ಯನ್‌ ಪ್ಯಾರಾ ಗೇಮ್ಸ್‌ನ ಮಹಿಳಾ ಸಿಂಗಲ್ಸ್‌ ಎಸ್‌ಎಲ್‌3 ಪ್ಯಾರಾ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಸಂಜನಾ ಕುಮಾರಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಅವರ ಸಾಧನೆಯ ಬಗ್ಗೆ ತಮಗೆ ಹೆಮ್ಮೆ ಇದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಮುಂಬರುವ ವರ್ಷಗಳಲ್ಲಿಅವರು ಉತ್ತಮ ಸಾಧನೆ ಮಾಡುವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು.

ಎಕ್ಸ್‌ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

‘‘ಏಷ್ಯನ್‌ ಪ್ಯಾರಾ ಗೇಮ್ಸ್‌ನಲ್ಲಿ ಸಂಜನಾ ಕುಮಾರಿ ತಮ್ಮ ಛಾಪು ಮೂಡಿಸಿದ್ದಾರೆ! ಮಹಿಳಾ ಸಿಂಗಲ್ಸ್‌ ಎಸ್‌ಎಲ್‌3 ಪ್ಯಾರಾ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿಕಂಚಿನ ಪದಕ ಗೆದ್ದಿದ್ದಕ್ಕಾಗಿ ಅವರ ಬಗ್ಗೆ ಹೆಮ್ಮೆಯಿದೆ. ಮುಂದಿನ ವರ್ಷಗಳಲ್ಲಿಅವರು ಉತ್ತಮ ಸಾಧನೆ ಮಾಡುವುದನ್ನು ಮುಂದುವರಿಸಲಿ: ಪ್ರಧಾನಮಂತ್ರಿ @narendramodi’’

 

*****