Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಚಿನ್ನ ಮತ್ತು ಕಂಚಿನ ಪದಕ ಗೆದ್ದ ಪ್ರಣವ್ ಸೂರ್ಮಾ ಮತ್ತು ಧರಂಬಿರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಹೊಸ ಕ್ರೀಡಾಕೂಟದ ದಾಖಲೆಯೊಂದಿಗೆ ಚಿನ್ನ ಉಳಿಸಿಕೊಂಡ ಪ್ರಣವ್ ಸೂರ್ಮಾ ಮತ್ತು ಪುರುಷರ ಕ್ಲಬ್ ಎಸೆತದ ಎಫ್ 51 ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಧರಂಬಿರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಅವರ ಸಾಧನೆಗಳು ರಾಷ್ಟ್ರಕ್ಕೆ ಹೆಮ್ಮೆಯ ಮೂಲವಾಗಿದೆ ಎಂದು ಹೇಳಿದ ಶ್ರೀ ನರೇಂದ್ರ ಮೋದಿ ಅವರು, ಅವರು ಪ್ರಕಾಶಿಸುವುದನ್ನು ಮುಂದುವರಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು ಮತ್ತು ಭವಿಷ್ಯದಲ್ಲಿ ಇನ್ನೂ ಅನೇಕ ಸಾಧನೆಗಳಿಗೆ ಹಾರೈಸಿದರು.

ಎಕ್ಸ್ ಖಾತೆಯಲ್ಲಿ ಪ್ರಧಾನಮಂತ್ರಿ ಕಾರ್ಯಾಲಯ ಈ ರೀತಿ ಹಂಚಿಕೊಂಡಿದೆ:

“ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ ಮತ್ತು ಕಂಚಿನ ಪದಕ!

ಹೊಸ ಕ್ರೀಡಾಕೂಟದ ದಾಖಲೆಯೊಂದಿಗೆ ಚಿನ್ನವನ್ನು ಉಳಿಸಿಕೊಂಡ ಪ್ರಣವ್ ಸೂರ್ಮಾ ಮತ್ತು ಕಂಚಿನ ಪದಕ ಗೆದ್ದ ಧರಂಬಿರ್ ಅವರಿಗೆ ಅಭಿನಂದನೆಗಳು. ಅವರ ಸಾಧನೆಗಳು ರಾಷ್ಟ್ರಕ್ಕೆ ಹೆಮ್ಮೆಯ ಮೂಲವಾಗಿದೆ. ಅವರು ಮಿಂಚುವುದನ್ನು ಮುಂದುವರಿಸಲಿ. ಭವಿಷ್ಯದಲ್ಲಿ ಅವರಿಗೆ ಇನ್ನೂ ಅನೇಕ ಸಾಧನೆಗಳಿಗೆ ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****