Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಬೆಳ್ಳಿ ಪದಕ ಜಯಿಸಿರುವ ನಿಮಿಷಾ ಚಕ್ಕುಂಗಲ್ ಪರಂಬಿಲ್ ಸುರೇಶ್ ಅವರಿಗೆ ಪ್ರಧಾನಮಂತ್ರಿ


ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಮಹಿಳೆಯರ ಲಾಂಗ್ ಜಂಪ್ ಟಿ 47 ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿರುವ ನಿಮಿಷಾ ಚಕ್ಕುಂಗಲ್ ಪರಂಬಿಲ್ ಸುರೇಶ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದ್ದಾರೆ.

ಸುರೇಶ್ ಅವರ ಸಮರ್ಪಣಾ ಭಾವ ಮತ್ತು ಕಠಿಣ ಪರಿಶ್ರಮವು ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ ಗೆ ಮತ್ತೊಂದು ಹೆಮ್ಮೆಯ ಕ್ಷಣ ತಂದಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. ಅವರು ಭವಿಷ್ಯದಲ್ಲೂ ಹೀಗೆಯೇ ಮಿನುಗಲಿ ಮತ್ತು ಇನ್ನಷ್ಟು ದೊಡ್ಡ ಯಶಸ್ಸನ್ನು ಸಾಧಿಸಲಿ ಎಂದು ಆಶಿಸುತ್ತಾ ಪ್ರಧಾನಮಂತ್ರಿಯವರು, ಭವಿಷ್ಯದ ಸ್ಪರ್ಧೆಗಳಿಗೆ ಶುಭ ಹಾರೈಸಿದ್ದಾರೆ.

 ಪ್ರಧಾನಮಂತ್ರಿಯವರ ಕಾರ್ಯಾಲಯ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:

“ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಮಹಿಳೆಯರ ಲಾಂಗ್ ಜಂಪ್ ಟಿ 47 ವಿಭಾಗದಲ್ಲಿ ರಜತ ಪದಕ ಗೆದ್ದಿರುವ ನಿಮಿಷಾ ಚಕ್ಕುಂಗಲ್ಪರಂಬಿಲ್ ಸುರೇಶ್ ಅವರಿಗೆ ಅಭಿನಂದನೆಗಳು! ಅವರ ಸಮರ್ಪಣಾ ಭಾವ ಮತ್ತು ಕಠಿಣ ಪರಿಶ್ರಮದಿಂದಾಗಿ ಭಾರತೀಯ ಪ್ಯಾರಾ ಅಥ್ಲೆಟಿಕ್ಸ್‌ ಗೆ ಮತ್ತೊಂದು ಹೆಮ್ಮೆಯ ಕ್ಷಣ ಒದಗಿ ಬಂದಿದೆ. ಅವರು ಹೀಗೆಯೇ ಮಿನುಗುತ್ತಿರಲಿ ಮತ್ತು ಇನ್ನೂ ಹೆಚ್ಚಿನ ಯಶಸ್ಸು ಸಾಧಿಸಲಿ. ಮುಂದಿನ ಸ್ಪರ್ಧೆಗಳಿಗೆ ಅವರಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****