Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಬೆಳ್ಳಿ ಪದಕ ಜಯಿಸಿರುವ ರಾಕೇಶ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಪ್ಯಾರಾ ಗೇಮ್ಸ್‌ ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 43/ಎಫ್ 44/ ಎಫ್ 62/ ಎಫ್ 64) ವಿಭಾಗದಲ್ಲಿ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಪದಕ ಪಡೆದಿರುವ ರಾಕೇಶ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ರಾಕೇಶ್ ಅವರ ಅತ್ಯುತ್ತಮ ಪ್ರಯತ್ನವು ದೇಶಕ್ಕೆ ಅಪಾರ ಸಂತಸ ತಂದಿದೆ ಎಂದು ಉಲ್ಲೇಖಿಸುತ್ತಾ ಶ್ರೀ ಮೋದಿ ಅವರು ರಾಕೇಶ್ ಅವರನ್ನು ಅಭಿನಂದಿಸಿದ್ದಾರೆ ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದೆ:

“ರಾಕೇಶ್ ಅವರ ಅತ್ಯುತ್ತಮ ಪ್ರಯತ್ನದ ಫಲವಾಗಿ ಭಾರತಕ್ಕೆ ಬೆಳ್ಳಿ ಲಭಿಸಿದೆ!

ಪುರುಷರ ಡಿಸ್ಕಸ್ ಥ್ರೋ ಎಫ್ 43/ ಎಫ್ 44/ ಎಫ್ 62/ ಎಫ್ 64 ವಿಭಾಗದಲ್ಲಿ ಅದ್ಭುತ ಎಸೆತದ ಮೂಲಕ, ಅವರು ದೇಶಕ್ಕೆ ಅಪಾರ ಹರ್ಷ ತಂದಿದ್ದಾರೆ. ಅವರಿಗೆ ಅಭಿನಂದನೆಗಳು ಮತ್ತು ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****