Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ನಲ್ಲಿ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ 


ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ಸ್ಪರ್ಧೆಯಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.

ಈ ಸ್ಪರ್ಧೆಯಲ್ಲಿ ಚೊಚ್ಚಲ ಪಂದ್ಯದಲ್ಲಿ ಚಿನ್ನದ ಪದಕ ಗೆದ್ದಿರುವುದು ಈ ಸಾಧನೆಯನ್ನು ಇನ್ನಷ್ಟು ವಿಶೇಷಗೊಳಿಸಿದೆ ಎಂದು ಪ್ರಧಾನಮಂತ್ರಿ ಹೇಳಿದರು. ನಿಶಾದ್ ಕುಮಾರ್ ಅವರ ಬಹುಮುಖ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಸಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯ ಈ ಕುರಿತು ಟ್ವೀಟ್ ಮಾಡಿದೆ;

“ಏಷ್ಯನ್ ಪ್ಯಾರಾ ಗೇಮ್ಸ್ 2026ರ ಪುರುಷರ ಲಾಂಗ್ ಜಂಪ್ ಟಿ47 ಸ್ಪರ್ಧೆಯಲ್ಲಿ ಅತ್ಯುತ್ತಮ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದ ನಿಶಾದ್ ಕುಮಾರ್ ಬಗ್ಗೆ ತುಂಬಾ ಹೆಮ್ಮೆಯಿದೆ. ಈ ಸ್ಪರ್ಧೆಯಲ್ಲಿ ಅವರ ಚೊಚ್ಚಲ ಪಂದ್ಯದಲ್ಲಿ ಚಿನ್ನ ಗೆದ್ದಿರುವುದು ಸಾಧನೆಯನ್ನು ಇನ್ನಷ್ಟು ವಿಶೇಷವಾಗಿಸುತ್ತದೆ. ಅವರ ಬಹುಮುಖ ಪ್ರತಿಭೆ, ದೃಢನಿಶ್ಚಯ ಮತ್ತು ಕ್ರೀಡಾ ಶ್ರೇಷ್ಠತೆ ನಿಜವಾಗಿಯೂ ಸ್ಪೂರ್ತಿದಾಯಕವಾಗಿದೆ. ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ: ಪ್ರಧಾನಮಂತ್ರಿ @narendramodi”

 

*****