Search

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯನ್ ಪ್ಯಾರಾ ಗೇಮ್ಸ್ 2026ರ ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಹೆಚ್ 1 ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿರುವ ಅವನಿ ಲೇಖರಾ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಹೆಚ್ 1 ವಿಭಾಗದಲ್ಲಿ ರಜತ ಪದಕ ಜಯಿಸಿರುವ ಅವನಿ ಲೇಖರಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಶ್ರೀ ಮೋದಿ ಅವರು ಲೇಖರಾ ಅವರ ಅತ್ಯುತ್ತಮ ಅಂಕ ಗಳಿಕೆ, ಸ್ಥಿರತೆ ಮತ್ತು ಬದ್ಧತೆಯನ್ನು ಶ್ಲಾಘಿಸುತ್ತಾ, ಈ ಸಾಧನೆಯು ದೇಶಕ್ಕೆ ನಿರಂತರ ಹೆಮ್ಮೆ ತರುತ್ತಲಿದೆ ಎಂದು ಉದ್ಗರಿಸಿದ್ದಾರೆ. ಲೇಖರಾ ಅವರ ಮುಂದಿನ ಪ್ರಯತ್ನಗಳಿಗೆ ಪ್ರಧಾನಮಂತ್ರಿ ಶುಭ ಹಾರೈಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

“ಅವನಿ ಲೇಖರಾ ಅವರಿಗೆ ಅತ್ಯದ್ಭುತ ಬೆಳ್ಳಿ ಪದಕ!

“ಏಷ್ಯನ್ ಪ್ಯಾರಾ ಗೇಮ್ಸ್ 2026ರಲ್ಲಿ, ಮಹಿಳೆಯರ 10 ಮೀಟರ್ ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಹೆಚ್ 1 ವಿಭಾಗದಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಬೆಳ್ಳಿ ಪದಕ ಜಯಿಸಿರುವುದಕ್ಕೆ ಅಭಿನಂದನೆಗಳು. ಅವರ ಸ್ಥಿರತೆ ಮತ್ತು ದೃಢನಿಶ್ಚಯವು ದೇಶಕ್ಕೆ ನಿರಂತರವಾಗಿ ಹೆಮ್ಮೆ ತರುತ್ತಿವೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಕೆಗಳು: ಪ್ರಧಾನಮಂತ್ರಿ @narendramodi”

 

*****