Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಏಷ್ಯಾ ಕಪ್ ಜಯಿಸಿದ ಭಾರತದ ಜೂనిಯರ್ ಪುರುಷರ ಹಾಕಿ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ


ಏಷ್ಯಾ ಕಪ್ ಫೈನಲ್‌ ನಲ್ಲಿ 4-1 ಅಂತರದ ಭರ್ಜರಿ ಗೆಲುವು ಸಾಧಿಸಿರುವ ಭಾರತೀಯ ಜೂనిಯರ್ ಪುರುಷರ ಹಾಕಿ ತಂಡವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ಇದು ಗಮನಾರ್ಹ ಸಾಧನೆ ಎಂದು ಬಣ್ಣಿಸಿರುವ ಪ್ರಧಾನಮಂತ್ರಿಯವರು, ಈ ಗೆಲುವು ಯುವ ಆಟಗಾರರ ಅನನ್ಯ ಪ್ರತಿಭೆಯ ಪ್ರತಿಬಿಂಬ ಎಂದು ಹೇಳಿದ್ದಾರೆ.

ಶ್ರೀ ಮೋದಿ ಅವರು ಇಡೀ ತಂಡಕ್ಕೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿಯವರ ಎಕ್ಸ್ ಪೋಸ್ಟ್ ಹೀಗಿದೆ: 

“ಏಷ್ಯಾ ಕಪ್ ಫೈನಲ್‌ ನಲ್ಲಿ 4-1 ಅಂತರದ ಭರ್ಜರಿ ಜಯ ಸಾಧಿಸಿರುವ ನಮ್ಮ ಜೂనిಯರ್ ಪುರುಷರ ಹಾಕಿ ತಂಡಕ್ಕೆ ಅಭಿನಂದನೆಗಳು.

ಇದು ನಿಜಕ್ಕೂ ಗಮನಾರ್ಹ ಸಾಧನೆ. ಈ ಗೆಲುವು ನಮ್ಮ ಯುವ ಆಟಗಾರರ ಅಮೋಘ ಪ್ರತಿಭೆಯನ್ನು ಪ್ರತಿಬಿಂಬಿಸುತ್ತದೆ. ಇಡೀ ತಂಡಕ್ಕೆ ಶುಭಾಶಯಗಳು!”

 

*****