Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾವನ್ನು ಅಭಿನಂದಿಸಿದ ಪ್ರಧಾನಮಂತ್ರಿ


ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಐಸಿಸಿ ಪುರುಷರ ಟಿ20 ವಿಶ್ವಕಪ್ ಗೆದ್ದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ್ದಾರೆ. ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯಗಳು, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪಂದ್ಯಾವಳಿಯುದ್ದಕ್ಕೂ ತಂಡವು ಅತ್ಯುತ್ತಮ ಧೈರ್ಯವನ್ನು ತೋರಿಸಿದೆ ಎಂದು ಅವರು ಹೇಳಿದರು.

ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;

“ಚಾಂಪಿಯನ್ಸ್!  

ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಅಭಿನಂದನೆಗಳು!

ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯಗಳು, ದೃಢನಿಶ್ಚಯ ಮತ್ತು ತಂಡದ ಕೆಲಸವನ್ನು ಪ್ರತಿಬಿಂಬಿಸುತ್ತದೆ. ಅವರು ಪಂದ್ಯಾವಳಿಯುದ್ದಕ್ಕೂ ಅತ್ಯುತ್ತಮ ಧೈರ್ಯವನ್ನು ತೋರಿಸಿದ್ದಾರೆ.

ಈ ಗೆಲುವು ಪ್ರತಿಯೊಬ್ಬ ಭಾರತೀಯನ ಹೃದಯವನ್ನು ಹೆಮ್ಮೆ ಮತ್ತು ಸಂತೋಷದಿಂದ ತುಂಬಿದೆ.

ಚೆನ್ನಾಗಿ ಆಡಿದ್ದೀರಿ, ಟೀಮ್ ಇಂಡಿಯಾ!” 

 

*****