Search

ಪಿಎಂಇಂಡಿಯಾಪಿಎಂಇಂಡಿಯಾ

ತಾಜಾ ಸುದ್ದಿಗಳು

ಪಿ. .ಐ. ಬಿ. ಸ್ವಯಂ ಮೂಲದಿoದ ವಿಷಯ

ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ


ಒಡಿಶಾದ ಕಟಕ್ ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ.

ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.

ಪ್ರಧಾನಮಂತ್ರಿ ಅವರು ಈ ಬಗ್ಗೆ  ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ:

“ಒಡಿಶಾದ ಕಟಕ್ ನ ಆಸ್ಪತ್ರೆಯಲ್ಲಿ ಸಂಭವಿಸಿದ ಅಪಘಾತವು ತೀವ್ರ ನೋವಿನಿಂದ ಕೂಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ” ಎಂದು ಹೇಳಿದ್ದಾರೆ.

“ଓଡ଼ିଶାର କଟକରେ ଏକ ହସ୍ପିଟାଲରେ ଘଟିଥିବା ଦୁର୍ଘଟଣା ଗଭୀର ଯନ୍ତ୍ରଣାଦାୟକ। ଯେଉଁମାନେ ନିଜ ପ୍ରିୟଜନଙ୍କୁ ହରାଇଛନ୍ତି ସେମାନଙ୍କ ପ୍ରତି ସମବେଦନା। ଆହତମାନଙ୍କ ଆଶୁ ଆରୋଗ୍ୟ ପାଇଁ ମୁଁ ପ୍ରାର୍ଥନା କରୁଛି।

ପ୍ରତ୍ୟେକ ମୃତକଙ୍କ ନିକଟ ସମ୍ପର୍କୀୟଙ୍କୁ ପିଏମଏନଆରଏଫରୁ ୨ ଲକ୍ଷ ଟଙ୍କାର ଅନୁକମ୍ପାମୂଳକ ସହାୟତା ପ୍ରଦାନ କରାଯିବ । ଆହତମାନଙ୍କୁ ୫୦,୦୦୦ ଟଙ୍କା ଦିଆଯିବ: ପ୍ରଧାନମନ୍ତ୍ରୀ @narendramodi”

 

*****