ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್‌ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು.
ಸಂಭಾಷಣೆಯ ವೇಳೆ, ಭಾರತವು ಖತಾರ್‌ನೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಅದರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಯಾವುದೇ ಉಲ್ಲಂಘನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು.
ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ತುರ್ತು ಅಗತ್ಯವನ್ನು ಉಭಯ ನಾಯಕರು ಒತ್ತಿ ಹೇಳಿದರು.
ಈ ಸವಾಲಿನ ಸಮಯದಲ್ಲಿ ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ಖತಾರ್ ನಾಯಕತ್ವವು ನೀಡಿದ ನಿರಂತರ ಬೆಂಬಲ ಮತ್ತು ಕಾಳಜಿಗಾಗಿ ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;
ನನ್ನ ಸಹೋದರ, ಕತಾರ್‌ನ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತನಾಡಿದ್ದೇನೆ. ನಾವು ಖತಾರ್‌ನೊಂದಿಗೆ ದೃಢವಾಗಿ ನಿಲ್ಲುತ್ತೇವೆ ಮತ್ತು ಅದರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಯಾವುದೇ ಉಲ್ಲಂಘನೆಯನ್ನು ಬಲವಾಗಿ ಖಂಡಿಸುತ್ತೇವೆ. ಮಾತುಕತೆ ಮತ್ತು ರಾಜತಾಂತ್ರಿಕತೆಯ ಮೂಲಕ ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ತುರ್ತು ಅಗತ್ಯವನ್ನು ನಾವು ಒತ್ತಿ ಹೇಳಿದ್ದೇವೆ. ಈ ಸವಾಲಿನ ಸಮಯದಲ್ಲಿ ಕತಾರ್‌ನಲ್ಲಿರುವ ಭಾರತೀಯ ಸಮುದಾಯಕ್ಕೆ ಅವರ ನಿರಂತರ ಬೆಂಬಲ ಮತ್ತು ಕಾಳಜಿಗಾಗಿ ನಾನು ನನ್ನ ಮೆಚ್ಚುಗೆಯನ್ನು ತಿಳಿಸಿದ್ದೇನೆ.
@TamimBinHamad’’
*****
Spoke with my brother, H.H. Sheikh Tamim bin Hamad Al Thani, the Amir of Qatar. We stand firmly in solidarity with Qatar and strongly condemn any violation of its sovereignty and territorial integrity. We emphasized the urgent need to restore peace and stability in the region…
— Narendra Modi (@narendramodi) March 3, 2026