ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು, ಅವರು ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಪ್ರಾದೇಶಿಕ ಭದ್ರತಾ ಕಾಳಜಿಗಳ ಕುರಿತು ಸಮಾಲೋಚಿಸಿದರು.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು ಮತ್ತು ಅವರಿಗೆ ಮತ್ತು ಕತಾರ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದರು. ಚರ್ಚೆಯ ವೇಳೆ, ಪ್ರಧಾನಮಂತ್ರಿ ಅವರು ಕತಾರ್ನೊಂದಿಗೆ ಭಾರತದ ಒಗ್ಗಟ್ಟನ್ನು ಪುನರುಚ್ಚರಿಸಿದರು ಮತ್ತು ಅವರ ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದರು. ಕತಾರ್ನಲ್ಲಿರುವ ಭಾರತೀಯ ಸಮುದಾಯಕ್ಕೆ ತೋರಿಸಲಾದ ಆರೈಕೆ ಮತ್ತು ಬೆಂಬಲಕ್ಕಾಗಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಕೃತಜ್ಞತೆ ಸಲ್ಲಿಸಿದರು ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೇಲುಗೈ ಸಾಧಿಸುವ ಭರವಸೆ ಹಂಚಿಕೊಂಡರು. ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರಕ್ಕಾಗಿ ಇಬ್ಬರೂ ನಾಯಕರು ತಮ್ಮ ಹಂಚಿಕೆಯ ನಿಲುವನ್ನು ಪುನರುಚ್ಚರಿಸಿದರು.
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ನನ್ನ ಸಹೋದರ ಕತಾರ್ನ ಅಮೀರ್ ಗೌರವಾನ್ವಿತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ಸಮಾಲೋಚನೆ ನಡೆಸಿದೆ ಮತ್ತು ಅವರಿಗೆ ಮತ್ತು ಕತಾರ್ ಜನರಿಗೆ ಈದ್ ಶುಭಾಶಯಗಳನ್ನು ತಿಳಿಸಿದೆನು.
ನಾವು ಕತಾರ್ನೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಮತ್ತು ಅವರ ಪ್ರದೇಶದ ಇಂಧನ ಮೂಲಸೌಕರ್ಯದ ಮೇಲಿನ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಎಂದು ಪುನರುಚ್ಚರಿಸಿದೆನು.
ಭಾರತೀಯ ಸಮುದಾಯಕ್ಕೆ ತೋರಿಸಲಾದ ಕಾಳಜಿ ಮತ್ತು ಬೆಂಬಲಕ್ಕಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದೆ ಮತ್ತು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೇಲುಗೈ ಸಾಧಿಸಬೇಕೆಂದು ಆಶಿಸುತ್ತೇನೆ.
ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತ ಮತ್ತು ಮುಕ್ತ ಸಂಚಾರವನ್ನು ನಾವು ಬೆಂಬಲಿಸುತ್ತೇವೆ.’’
*****
Spoke with my brother, H.H. Sheikh Tamim bin Hamad Al Thani, the Amir of Qatar, and conveyed warm Eid greetings to him and the people of Qatar.
— Narendra Modi (@narendramodi) March 19, 2026
Reiterated that we stand in solidarity with Qatar and strongly condemn the attacks on the region’s energy infrastructure.
Expressed…