ಪಿಎಂಇಂಡಿಯಾ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕತಾರ್ ರಾಜ್ಯದ ಅಮೀರ್ ಘನತೆವೆತ್ತ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.
ಕತಾರ್ ನ ಅಮೀರ್ ರ ತಂದೆ ಘನತೆವೆತ್ತ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಪ್ರಧಾನಮಂತ್ರಿ ತಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದರು.
ಆಧುನಿಕ ಕತಾರ್ ನ ಮುಖ್ಯ ವಾಸ್ತುಶಿಲ್ಪಿಯಾಗಿ ಅಮೀರರ ತಂದೆ ಅವರ ಮಹತ್ವದ ಕೊಡುಗೆಗಳನ್ನು ಸ್ಮರಿಸಿಕೊಂಡ ಪ್ರಧಾನಮಂತ್ರಿ, ಅವರ ದಾರ್ಶನಿಕ ನಾಯಕತ್ವಕ್ಕೆ ಗೌರವ ನಮನ ಸಲ್ಲಿಸಿದರು ಮತ್ತು ಕಳೆದ ಕೆಲವು ವರ್ಷಗಳಿಂದೀಚೆಗೆ ಭಾರತ-ಕತಾರ್ ಸಂಬಂಧಗಳನ್ನು ಬಲವರ್ಧನೆಗೊಳಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಹಾಗೂ ಕತಾರ್ ನಲ್ಲಿ ಭಾರತ ಮತ್ತು ಭಾರತೀಯ ಸಮುದಾಯದ ಬಗ್ಗೆ ಅವರ ಆಳವಾದ ಪ್ರೀತಿಯನ್ನು ಸ್ಮರಿಸಿದರು.
ಕತಾರ್ ನ ಅಮೀರ್ ಅವರು ಪ್ರಧಾನಮಂತ್ರಿಯವರ ಕರೆಗೆ ಧನ್ಯವಾದ ಅರ್ಪಿಸಿದರು ಮತ್ತು ಈ ಕಷ್ಟದ ಸಮಯದಲ್ಲಿ ನೆರವಿನ ಮಾತುಗಳಿಗೆ ತಮ್ಮ ಕೃತಜ್ಞತೆಯನ್ನು ಸಲ್ಲಿಸಿದರು.
ಅಮೀರ್ ರ ತಂದೆಯ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಮತ್ತು ಭಾರತ-ಕತಾರ್ ಕಾರ್ಯತಾಂತ್ರಿಕ ಪಾಲುದಾರಿಕೆ ಮತ್ತು ಜನರ ನಡುವಿನ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ತಮ್ಮ ಸಂಕಲ್ಪವನ್ನು ಇಬ್ಬರೂ ನಾಯಕರು ಪುನರುಚ್ಚರಿಸಿದರು.
ಜತೆಗೆ ಉಭಯ ನಾಯಕರು ನಿಕಟ ಸಂಪರ್ಕದಲ್ಲಿರಲು ಒಪ್ಪಿಕೊಂಡರು.
*****
Spoke with H.H. Sheikh Tamim bin Hamad Al Thani, the Amir of Qatar and conveyed heartfelt condolences on the passing of H.H. the Father Amir, Sheikh Hamad bin Khalifa Al Thani. Recalled his deep affection for India, his warmth towards the Indian community in Qatar and his…
— Narendra Modi (@narendramodi) July 16, 2026